ಗದಗ: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಅರೆಬರೆ ಸುಟ್ಟ ಸ್ಥಿತಿಯಲ್ಲಿ ತಾಲ್ಲೂಕಿನ ಹೊಂಬಳ-ಹುಯಿಲಗೋಳ ರಸ್ತೆಯ ಸೇತುವೆ ಕೆಳಗೆ ಪತ್ತೆಯಾಗಿದೆ.

ಮೃತ ಯುವಕನನ್ನು ಹುಯಿಲಗೋಳ ಗ್ರಾಮದ ಚಂದ್ರು ಬಸವರಾಜ ಕುರಿ (28) ಎಂದು ಗುರುತಿಸಲಾಗಿದೆ.

ಮೃತ ಚಂದ್ರು ಬಸವರಾಜ ಕುರಿ ಮಾರ್ಚ್ 24ರಂದು ರಾತ್ರಿ ಊಟ ಮಾಡಿ ಮಧ್ಯರಾತ್ರಿ 12 ಸುಮಾರಿಗೆ ಮೊಬೈಲ್ನಲ್ಲಿ ಮಾತನಾಡುತ್ತ ಮನೆಯಿಂದ ಆಚೆ ಹೋಗಿದ್ದರು. ಬಳಿಕ, ನಾಲ್ಕು ದಿನಗಳಾದರೂ ಮನೆಗೆ ಬಂದಿರಲಿಲ್ಲ. ಈ ವೇಳೆ ಯುವಕನ ಪೋಷಕರು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಮಾರ್ಚ್ 28ರಂದು ಹೊಂಬಳ-ಹುಯಿಲಗೋಳ ರಸ್ತೆಯ ಅಕ್ಕಪಕ್ಕದ ಜಮೀನುಗಳ ರೈತರು ಸೇತುವೆ ಕೆಳಗೆ ಮೃತದೇಹ ಬಿದ್ದಿರುವ ಮಾಹಿತಿಯನ್ನು ಪೊಲೀಸರಿಗೆ ತಿಳಿಸಿದ್ದಾರೆ. ನಂತರ ಪೊಲೀಸರು ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದರು.

ಯುವಕನ ಪೋಷಕರು ಮೃತದೇಹವನ್ನು ಗುರುತಿಸಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಸೇತುವೆ ಕೆಳಭಾಗದಲ್ಲಿ ಬಿಸಾಕಿ ಅರೆಬೆರೆ ಸುಟ್ಟು ಹಾಕಿ ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-23-914731845

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.