ಮುಳಗುಂದ: ವಾಹನಗಳ ಸಂಚಾರಕ್ಕೆ ತೊಂದರೆ ಆಗುತ್ತಿವೆ ಎನ್ನುವ ಕಾರಣಕ್ಕೆ ಗದಗ-ಮುಳಗುಂದ ನಡುವಿನ ರಾಜ್ಯ ಹೆದ್ದಾರಿಯ ರಸ್ತೆ ಅಕ್ಕ-ಪಕ್ಕದ ಸಾಲು ಮರಗಳ ಪೈಕಿ 45 ಮರಗಳ ರೆಂಬೆ ಕೊಂಬೆ ಹಾಗೂ 15 ಮರಗಳನ್ನು ಸಂಪೂರ್ಣ ತೆರವುಗೊಳಿಸುವ ಕಾರ್ಯ ಕೈಗೊಂಡಿರುವ ಅರಣ್ಯ ಇಲಾಖೆ ವಿರುದ್ದ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೂರಾರು ವರ್ಷಗಳಿಂದ ರಸ್ತೆಯ ಸೌಂದರ್ಯ ಹೆಚ್ಚಿಸಿ, ದಣಿದವರಿಗೆ, ವಾಹನ ಸವಾರರಿಗೆ ನೆರಳು ನೀಡಿ, ಜೀವ ಸಂಕಲುಗಳಿಗೆ ಆಶ್ರಯ ನೀಡಿದ ಮರಗಳನ್ನು ತೆರವುಗೊಳಿಸಲು ಕಳೆದ ಮಾರ್ಚ್ 13ರವರೆಗೆ ಸಾರ್ವಜನಿಕರ ಆಕ್ಷೇಪಣೆ ಸಲ್ಲಿಸುಲು ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿತ್ತು. ಮರಗಳ ತೆರವು ಮಾಡದಂತೆ ಪರಿಸರ ಪ್ರೇಮಿಗಳು, ಸಾರ್ವಜನಿಕರು ಸೇರಿ 30ಕ್ಕೂ ಹೆಚ್ಚು ಆಕ್ಷೇಪಣೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗೆ ಸಲ್ಲಿಸಿದ್ದರು.

ಅರ್ಜಿ ಸ್ವೀಕರಿಸಿದ್ದ ಅಧಿಕಾರಿ ಯಾವುದೇ ಉತ್ತರವನ್ನ ಈವರೆಗೂ ನೀಡಿಲ್ಲ. ಆದರೆ, ಮರಗಳ ರಂಬೆ ಕೊಂಬೆಗಳನ್ನು ಕತ್ತರಿಸುತ್ತಿದ್ದಾರೆ. ಅವರೇ ಏಕಮುಖ ತೀರ್ಮಾನ ತೆಗೆದುಕೊಳ್ಳುವುದಿದ್ದರೆ ಸಾರ್ವಜನಿಕರ ಅಭಿಪ್ರಾಯವನ್ನಾದರೂ ಯಾಕೆ ಕೇಳಿದರು? ಸಾರ್ವಜನಿಕರ ಆಕ್ಷೇಪಣೆಗಳಿಗೆ ಉತ್ತರ ನೀಡದೇ ಅರಣ್ಯ ಇಲಾಖೆ ಮರಗಳ ತೆರವು ಕಾರ್ಯ ಕೈಗೊಂಡಿದೆ. ಆಕ್ಷೇಪಣೆ ಅರ್ಜಿಗಳಿಗೆ ಯಾವುದೇ ಕಿಮ್ಮತ್ತು ಇಲ್ಲವೇ ಎಂದು ಪ್ರಜ್ಞಾವಂತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಮರಗಳ ತೆರವಿಗೆ ಸಂಬಂಧಪಟ್ಟಂತೆ ಸಾರ್ವಜನಿಕರಿಂದ ನಿಗದಿತ ಅವಧಿಯೊಳಗೆ ಆಕ್ಷೇಪಣೆ ಸಲ್ಲಿಕೆಯಾದಲ್ಲಿ ತೆರವು ಕಾರ್ಯ ಸ್ಥಗಿತಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದರು. ಆದರೆ, ಈಗ ಏಕಾಏಕಿ ಮರಗಳನ್ನು ತೆರವುಗೊಳಿಸುತ್ತಿರುವುದು ಯಾಕೆ’ ಎಂದು ಸಾಮಾಜಿಕ ಕಾರ್ಯಕರ್ತ ಬಸವರಾಜ ರಾಮರಡ್ಡಿ ಪ್ರಶ್ನಿಸಿದ್ದಾರೆ.

‘ಹಲವು ವರ್ಷಗಳಿಂದ ರಸ್ತೆಯ ಎರಡು ಬದಿಯಲ್ಲಿ ಸಮೃದ್ಧವಾಗಿ ಬೆಳೆದು ನಿಂತಿರುವ ಹುಣಸೆ ಹಾಗೂ ಬೇವಿನ ಮರಗಳು ರಸ್ತೆಯ ಸೌಂದರ್ಯ ಹೆಚ್ಚಿಸಿವೆ. ರಸ್ತೆಯ ಬದಿಗಳಲ್ಲಿ 250ಕ್ಕೂ ಹೆಚ್ಚು ಮರಗಳಿವೆ. ಮಳೆಗಾಲದಲ್ಲಿ ಹಚ್ಚ ಹಸುರಿನಿಂದ ಕಂಗೊಳಿಸಿ, ಬೇಸಿಗೆಯಲ್ಲಿ ತಂಪಿನ ವಾತಾವರಣ ನೀಡುತ್ತಿವೆ. ಬಿರುಬಿಸಿಲಿನ ತಾಪದಲ್ಲಿ ಈ ರಸ್ತೆ ಮೇಲೆ ಹೋಗುತ್ತಿದ್ದರೆ ಮರಗಳು ಎರಡು ರಸ್ತೆಗೆ ಬಾಗಿ ನೆರಳು ನೀಡುತ್ತಿವೆ. ವಾಹನ ಸವಾರರಿಗೆ ಆಹ್ಲಾದಕರ ವಾತಾವರಣ ಅನುಭವ ನೀಡುತ್ತಿದೆ. ಹೀಗಿದ್ದರೂ ಮರಗಳ ತೆರವಿಗೆ ಅರಣ್ಯ ಇಲಾಖೆ ಮುಂದಾಗಿದೆ’ ಎಂದು ಪರಿಸರ ಪ್ರೇಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

‘ಸದ್ಯ ಮುಳಗುಂದ ವ್ಯಾಪ್ತಿಯ ರೈತರ ಹೊಲಗಳಲ್ಲಿ ಪವನ ವಿದ್ಯುತ್ ಯಂತ್ರಗಳ ಅಳವಡಿಕೆ ಕೆಲಸ ಪ್ರಾರಂಭಿಸಿದ್ದು, ಅದಕ್ಕೆ ಸಂಬಂಧಿಸಿದ ಯಂತ್ರಗಳ ಓಡಾಟಕ್ಕೆ ಪರೋಕ್ಷವಾಗಿ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮರಗಳ ತೆರವು ಮಾಡಲಾಗುತ್ತಿದೆ. ಆದರೆ ಮರಗಳ ತೆರವಿಗೆ ನಷ್ಟ ಭರಿಸುತ್ತಿಲ್ಲ, ಸಸಿಗಳ ನೆಡುತ್ತಿಲ್ಲ. ಆದರೆ ಪರಿಸರ ನಾಶ ಮಾಡುತ್ತಿದ್ದಾರೆ’ ಎಂದು ಪಟ್ಟಣ ಪಂಚಾಯ್ತಿ ಮಾಜಿ ಸದಸ್ಯ ಮಹಾಂತೇಶ ಎಸ್.ಕಣವಿ ಆರೋಪಿಸಿದರು.

ಮರಗಳ ತೆರವು ಕಾರ್ಯದ ಬಗ್ಗೆ ಪರಿಶೀಲಿಸಿ, ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.