ಗದಗ: ‘ಜಿಲ್ಲೆಯ ಸಾಂಸ್ಕೃತಿಕ ಪರಿಸರವನ್ನು ಜೀವಂತವಾಗಿರಿಸುವಲ್ಲಿ ನಟರಂಗ ಸಂಸ್ಥೆಯ ಪಾತ್ರ ಅಪಾರವಾಗಿದೆ’ ಎಂದು ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಹೇಳಿದರು.

ನಗರದ ಪಂ. ಭೀಮಸೇನ ಜೋಶಿ ರಂಗಮಂದಿರದಲ್ಲಿ ನಟರಂಗ ಕಲ್ಚರಲ್ ಅಕಾಡೆಮಿ ಮತ್ತು ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ‘ಮಕ್ಕಳ ಕಲರವ-2026’ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ದಶಮಾನೋತ್ಸವದ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದರು.

‘ಸೋಮಶೇಖರ ಚಿಕ್ಕಮಠ ನೇತೃತ್ವದ ನಟರಂಗ ಸಂಸ್ಥೆ ಗ್ರಾಮೀಣ ಭಾಗದ ಮಕ್ಕಳ ಪ್ರತಿಭಾ ಪ್ರದರ್ಶನಕ್ಕೂ ವೇದಿಕೆ ಕಲ್ಪಿಸಿದೆ. ಈ ಸಂಸ್ಥೆಯ ಕಾರ್ಯಚಟುವಟಿಕೆ ಮತ್ತಷ್ಟು ವಿಸ್ತಾರಗೊಳ್ಳಲು ಜಾಗದ ಅವಶ್ಯಕತೆ ಇರುವುದನ್ನು ಸಂಸ್ಥೆಯ ಪದಾಧಿಕಾರಿಗಳು ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದು, ಜಾಗ ಒದಗಿಸಲು ಪ್ರಯತ್ನಿಸಲಾಗುವುದು’ ಎಂದು ಭರವಸೆ ನೀಡಿದರು.

ಕಲಾವಿದೆ ಪ್ರೀತಿ ಹೊನಗುಡಿ ಮಾತನಾಡಿ, ‘ಉತ್ತರ ಕರ್ನಾಟಕವು ಕಲೆಯ ತವರೂರು. ಇಂದಿನ ಮೊಬೈಲ್ ಯುಗದಲ್ಲೂ ಜನಪದ ಮತ್ತು ಕಲಾ ಸಂಸ್ಕೃತಿಯನ್ನು ಜನ ಪೋಷಿಸುತ್ತಿದ್ದಾರೆ ಎಂಬುದಕ್ಕೆ ನಟರಂಗ ಸಂಸ್ಥೆಯ ಈ ಅದ್ಧೂರಿ ಕಾರ್ಯಕ್ರಮವೇ ಸಾಕ್ಷಿ. ಬೇಸಿಗೆ ಶಿಬಿರದ ಮೂಲಕ ಇಲ್ಲಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಉತ್ತಮವಾಗಿ ನಡೆಯುತ್ತಿದೆ’ ಎಂದರು.

ಸಾನ್ನಿಧ್ಯ ವಹಿಸಿದ್ದ ಅಡ್ನೂರು-ರಾಜೂರ-ಗದಗ ಬೃಹನ್ಮಠದ ಅಭಿನವ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ನಟರಂಗ ಸಂಸ್ಥೆಯು ಸಮಾಜಕ್ಕೆ ಒಳ್ಳೆಯ ಕಲಾವಿದರನ್ನು ನೀಡುತ್ತಿದೆ. ಪಂ. ಪಂಚಾಕ್ಷರ ಗವಾಯಿಗಳು ಹಾಗೂ ಪುಟ್ಟರಾಜ ಗವಾಯಿಗಳಂತಹ ಮಹಾನ್ ಪ್ರತಿಭೆಗಳು ಈ ಮಣ್ಣಿನಿಂದ ಮತ್ತೆ ಮೂಡಿಬರಬೇಕಾದರೆ ಇಂತಹ ಸಂಸ್ಥೆಗಳಿಗೆ ಸ್ವಂತ ನೆಲೆ ಇರಬೇಕು. ಸರ್ಕಾರ ಇಂತಹ ಜನಪರ ಸಂಸ್ಥೆಗೆ ಸೂಕ್ತ ಆಶ್ರಯ ನೀಡಬೇಕು’ ಎಂದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ನಂದಾ ಹಣಬರಹಟ್ಟಿ, ರಂಗಕರ್ಮಿ ಮಹಾಂತೇಶ ಗಜೇಂದ್ರಗಡ, ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್.ಎಸ್.ಪಟ್ಟಣಶೆಟ್ಟರ, ಶರಣಬಸಪ್ಪ ಗುಡುಮನಿ, ಜಿ.ಬಿ.ಪಾಟೀಲ, ಮುತ್ತಣ್ಣ ಮುಶಿಗೇರಿ, ವಿಜಯಕುಮಾರ ಹಿರೇಮಠ, ವಿಜಯಲಕ್ಷ್ಮೀ ಮಾನ್ವಿ ಇದ್ದರು.

ರಾಹುಲ್ ರಾಠೋಡ ಪ್ರಾರ್ಥಿಸಿದರು. ಆನಂದಯ್ಯ ವಿರಕ್ತಮಠ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಶಿಬಿರದ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರನ್ನು ರಂಜಿಸಿದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-23-1923895899

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.