1500ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿ
‘ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮ ಡಿ.13ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಸಮ್ಮೇಳನದ ಮುಖ್ಯ ಅತಿಥಿಗಳಾಗಿ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಪ್ರಿಯಾಂಕ್ ಖರ್ಗೆ ಭಾಗವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅಧ್ಯಕ್ಷತೆ ವಹಿಸುವರು’ ಎಂದು ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಸುರೇಶ ವಿ. ನಾಡಗೌಡ ತಿಳಿಸಿದರು. ‘ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಕರ್ನಾಟಕ ರಾಜ್ಯ ವಿಕೇಂದ್ರಿಕೃತ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್.ಪಾಟೀಲ ಅಖಿಲ ಭಾರತ ಪಂಚಾಯತ್ ಪರಿಷತ್ ಅಧ್ಯಕ್ಷ ಸುಬೋಧ್ ಕಾಂತ್ ಸಹಾಯ್ ಜಿಲ್ಲೆಯ ಸಂಸದರು ಶಾಸಕರು ಜಿಲ್ಲಾ-ತಾಲ್ಲೂಕು-ಗ್ರಾಮ ಪಂಚಾಯತ್ ಅಧ್ಯಕ್ಷರುಗಳು ಸಹ ಪಾಲ್ಗೊಳ್ಳಲಿದ್ದಾರೆ’ ಎಂದರು. ಕರ್ನಾಟಕ ಪಂಚಾಯತ್ ರಾಜ್ ಪರಿಷತ್ತಿನ ಕಾರ್ಯಕಾರಿ ಅಧ್ಯಕ್ಷ ವಿ.ವೈ.ಘೋರ್ಪಡೆ ಉಪಾಧ್ಯಕ್ಷೆ ಸೌಭಾಗ್ಯ ಬಸವರಾಜ್ ಉಪಸ್ಥಿತರಿರುವರು. ಸಮ್ಮೇಳನದಲ್ಲಿ ರಾಜ್ಯ ಮತ್ತು ರಾಷ್ಟ್ರದ ವಿವಿಧ ಭಾಗಗಳಿಂದ 1500ಕ್ಕೂ ಹೆಚ್ಚು ಪಂಚಾಯತ್ ಪ್ರತಿನಿಧಿಗಳು ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳು ವಿಷಯ ತಜ್ಞರು ವಿಶ್ವವಿದ್ಯಾಲಯದ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.