ಗದಗ: ಜಿಲ್ಲೆಯ ರೋಣ ತಾಲ್ಲೂಕಿನ ಅಸೂಟಿ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಡಿಒ ಮುಕ್ತುಮ್ ಹುಸೇನ ಅವರ ಆತ್ಮಹತ್ಯೆ ಪ್ರಕರಣವನ್ನು ಸಮಗ್ರ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಿಯಾಜ್ ಕೆ. ಆಗ್ರಹಿಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಪಿಡಿಒ ಹಾಗೂ ಆರ್ಡಿಪಿಆರ್ ವೃಂದ ಸಂಘಗಳ ಪದಾಧಿಕಾರಿಗಳ ನಿಯೋಗವು ಬುಧವಾರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿದರು.

‘ಪಿಡಿಒಗಳ ಮೇಲೆ ದಿನದಿಂದ ದಿನಕ್ಕೆ ಕೆಲಸದ ಒತ್ತಡ ಹೆಚ್ಚುತ್ತಿದ್ದು, ಮೇಲಧಿಕಾರಿಗಳ ಅನವಶ್ಯಕ ಹಸ್ತಕ್ಷೇಪ ಹಾಗೂ ಆಡಳಿತಾತ್ಮಕ ಒತ್ತಡದಿಂದ ಅಧಿಕಾರಿಗಳು ಮಾನಸಿಕವಾಗಿ ಕುಗ್ಗುತ್ತಿದ್ದಾರೆ. ಇದೇರೀತಿಯ ಒತ್ತಡಗಳು ಮುಕ್ತುಮ್ ಹುಸೇನ ಅವರ ಆತ್ಮಹತ್ಯೆಗೆ ಕಾರಣವಾಗಿರಬಹುದು’ ಎಂದು ಅನುಮಾನ ವ್ಯಕ್ತಪಡಿಸಿದರು.

‘ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಂಪೂರ್ಣ ತನಿಖೆ ನಡೆಸಬೇಕು. ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬಕ್ಕೆ ತಕ್ಷಣವೇ ನ್ಯಾಯ ಒದಗಿಸಿ, ಸಮರ್ಪಕ ಪರಿಹಾರ ನೀಡಬೇಕು. ಜೊತೆಗೆ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಆರ್ಥಿಕ ಭದ್ರತೆ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.

ಪಿಡಿಒಗಳ ಮೇಲೆ ಇರುವ ಅತಿಯಾದ ಕೆಲಸದ ಒತ್ತಡವನ್ನು ಕಡಿಮೆ ಮಾಡುವ ಕ್ರಮಗಳನ್ನು ಸರ್ಕಾರ ಜಾರಿಗೆ ತರಬೇಕು. ಕೆಲಸದ ಸಮಯ, ಹೊಣೆಗಾರಿಕೆ ಹಾಗೂ ಆಡಳಿತಾತ್ಮಕ ನಿಯಮಗಳಿಗೆ ಸ್ಪಷ್ಟ ಮಾರ್ಗಸೂಚಿಗಳನ್ನು ರೂಪಿಸಬೇಕು. ಜೊತೆಗೆ ಪಿಡಿಒಗಳಿಗೆ ಭದ್ರತೆ ಹಾಗೂ ಮಾನಸಿಕ ಬೆಂಬಲ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ವಿವಿಧ ತಾಲ್ಲೂಕುಗಳಿಂದ ಬಂದಿದ್ದ ಪಿಡಿಒಗಳು, ಕಾರ್ಯದರ್ಶಿಗಳು, ಡಾಟಾ ಎಂಟ್ರಿ ಆಪರೇಟರ್ಗಳು, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-23-1415584361

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.