ಗದಗ: ನಗರದಲ್ಲಿ ಸಂಚರಿಸುವ ಆಟೊ ಮತ್ತು ಟಂಟಂಗಳ ವಿರುದ್ಧ ಸಂಚಾರ ನಿಯಮ ಉಲ್ಲಂಘನೆ ಸೇರಿದಂತೆ ಪ್ರಯಾಣಿಕರಿಂದ ವಿವಿಧ ದೂರುಗಳು ಬಂದ ಕಾರಣ ಗದಗ ಪೊಲೀಸರು ಗುರುವಾರ ವಿಶೇಷ ಕಾರ್ಯಾಚರಣೆ ನಡೆಸಿ, 140 ವಾಹನಗಳನ್ನು ವಶಕ್ಕೆ ಪಡೆದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಮಾರ್ಗದರ್ಶನದಲ್ಲಿ ಗದಗ ಡಿವೈಎಸ್ಪಿ ಮುರ್ತುಜಾ ಖಾದ್ರಿ ನೇತೃತ್ವದಲ್ಲಿ ಸಿಪಿಐ, ಪಿಎಸ್ಐ ಹಾಗೂ ಸಿಬ್ಬಂದಿ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದರು.

ಡಿವೈಎಸ್ಪಿ ಮುರ್ತುಜಾ ಖಾದ್ರಿ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಲಾಗಿತ್ತು. ಅವರು ನಗರದ ಭೂಮರಡ್ಡಿ ವೃತ್ತ, ರೋಟರಿ ಸರ್ಕಲ್, ಗಾಂಧಿ ಸರ್ಕಲ್, ಮುಳಗುಂದ ನಾಕಾ ಸೇರಿ ನಗರದ ವಿವಿಧೆಡೆ ಆಟೊ ಮತ್ತು ಟಂಟಂಗಳ ದಾಖಲೆ ಪರಿಶೀಲಿಸಿದರು.

ಮ್ಯೂಸಿಕ್ ಪ್ಲೇಯರ್ನಲ್ಲಿ ಜೋರು ಸಂಗೀತ ಹಾಕಿ ಶಬ್ದ ಮಾಲಿನ್ಯ ಉಂಟುಮಾಡುವುದು, ಚಾಲಕನ ಪಕ್ಕದಲ್ಲಿ ಪ್ರಯಾಣಿಕರನ್ನು ಕೂರಿಸಿಕೊಳ್ಳುವುದು, ಕಾಗದ ಪತ್ರಗಳಿಲ್ಲದ ವಾಹನ, ಚಾಲನಾ ಪರವಾನಗಿ, ವಾಹನ ವಿಮೆ ಸೇರಿದಂತೆ ಸಂಚಾರ ನಿಯಮ ಪಾಲಿಸದಿರುವ ಆಟೊ ಹಾಗೂ ಟಂಟಂಗಳನ್ನು ಪತ್ತೆ ಹಚ್ಚಿ, ವಶಕ್ಕೆ ಪಡೆದುಕೊಳ್ಳಲಾಯಿತು.

‘ಆಟೊ ಹಾಗೂ ಟಂಟಂ ವಿರುದ್ಧ ಸಾರ್ವಜನಿಕರಿಂದ ಸಾಕಷ್ಟು ದೂರು ಬಂದ ಹಿನ್ನಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗಿದೆ. ದಾಖಲೆ ಸರಿ ಇಲ್ಲದ ವಾಹನಗಳನ್ನು ಸಂಪೂರ್ಣ ಸೀಜ್ ಮಾಡಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.