ಗದಗ: ರೋಣ ತಾಲ್ಲೂಕಿನಾದ್ಯಂತ ವ್ಯಾಪಕವಾಗಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡು ದಲಿತ ಹೋರಾಟಗಾರರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ ನಗರದಲ್ಲಿನ ಜಿಲ್ಲಾಡಳಿತ ಭವನದ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

‘ಎರಡು ವರ್ಷಗಳಿಂದ ಅಕ್ರಮವಾಗಿ ಮರಳು ಸಾಗಣೆ, ಮಟ್ಕಾ, ಜೂಜು ಹಾಗೂ ಬಡ್ಡಿ ದಂಧೆಗಳು ಅವ್ಯಾಹತವಾಗಿ ನಡೆಯುತ್ತಿವೆ. ಇದಕ್ಕೆ ಕೆಲ ಅಧಿಕಾರಿಗಳ ಬೆಂಬಲವಿದೆ. ಈ ಬಗ್ಗೆ ಪ್ರಶ್ನಿಸಿದವರ ವಿರುದ್ಧ ದೌರ್ಜನ್ಯ ಎಸಗುತ್ತಿದ್ದಾರೆ’ ಎಂದು ಪ್ರತಿಭಟನಕಾರರು ದೂರಿದರು.

‘ಅಕ್ರಮಗಳ ಕುರಿತು ನಿಷ್ಪಕ್ಷಪಾತವಾಗಿ, ಉನ್ನತ ಮಟ್ಟದ ತನಿಖೆ ನಡೆಸಬೇಕು. ಭ್ರಷ್ಟ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಹೋರಾಟಗಾರರ ವಿರುದ್ಧ ದಾಖಲಿಸಿರುವ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು. ಈ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಸಮಿತಿಯ ಪ್ರಧಾನ ಸಂಚಾಲಕ ಹನುಮಂತ ಟಿ. ಚಲವಾದಿ, ಬಸವರಾಜ್ ಕಾಳೆ ಮತ್ತು ಶರಣಪ್ಪ ಗಡಿಗನ, ಕಾರ್ಯಕರ್ತರು, ಸೇರಿದಂತೆ ಇತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-22-1573457884

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.