ಗದಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಂಡರಗಿ ತಾಲ್ಲೂಕು ಸಾರ್ವಜನಿಕ ಹೋರಾಟ ವೇದಿಕೆ, ಗದಗ-ಹರಪನಹಳ್ಳಿ ರೈಲು ಮಾರ್ಗ ರಚನೆಯ ಜಂಟಿ ಕ್ರಿಯಾ ಸಮಿತಿ, ಅದ್ವಿಕ್ ವಿವಿಧೋದ್ದೇಶಗಳ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ‘ಅಸಹಕಾರ ಚಳವಳಿ ಜನ ಕಲ್ಯಾಣ ಯಾತ್ರೆ’, ಬೆಂಗಳೂರು ಚಲೋ ಮತ್ತು ಮೇ 25ರಂದು ವಾರಾಣಸಿಯ ಡಿಸಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮುಂಡರಗಿ ತಾಲ್ಲೂಕು ಸಾರ್ವಜನಿಕ ಹೋರಾಟ ವೇದಿಕೆ ಸಂಚಾಲಕ ಬಸವರಾಜ ನವಲಗುಂದ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗದಗ-ಹರಪನಹಳ್ಳಿ ರೈಲು ಮಾರ್ಗ ನಿರ್ಮಿಸಲು ಕೂಡಲೇ ಸರ್ಕಾರ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಕೊಪ್ಪಳ-ಮುಂಡರಗಿ-ಶಿಗ್ಗಾವಿ ರಾಷ್ಟ್ರೀಯ ಹೆದ್ದಾರಿ 2017 ರಲ್ಲಿ ಲೋಕೋಪಯೋಗಿ ಇಲಾಖೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಕೊಪ್ಪಳದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ಸುಮಾರು ವರ್ಷ ಗತಿಸಿ ಹೋಗಿದೆ. ಅದನ್ನು ಅನುಷ್ಠಾನಗೊಳಿಸಿಕೊಳ್ಳಲು ಲೋಕೋಪಯೋಗಿ ರಾಜ್ಯ ಸಚಿವ ಸತೀಶ ಜಾರಕಿಹೊಳಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಮುಂಡರಗಿ ಪಟ್ಟಣದ ಅಂಚೆ ಕಚೇರಿ ಜಾಗದಲ್ಲಿ ಅಂಚೆ ಕಚೇರಿ ಕಟ್ಟಡ ನಿರ್ಮಾಣವಾಗಬೇಕಾಗಿತ್ತು. 42ವರ್ಷ ಜಾಗ ಖರೀದಿಸಿ ಕೈಬಿಟ್ಟಿರುವದು ವಿಷಾದನೀಯ. ಅರಭಾವಿ ಚಳ್ಳಕೆರೆ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಈ ಭವ್ಯ ಜಾಗದಲ್ಲಿ ಅಂಚೆ ಕಚೇರಿ ಕಟ್ಟಡ ನಿರ್ಮಾಣವಾಗಬೇಕು ಎಂದು ಆಗ್ರಹಿಸಿದರು.

ಈ ವೇಳೆ ಫಕ್ಕಿರಪ್ಪ ಹೆಬಸೂರ, ಬರ್ಕತಲಿ ಮುಲ್ಲಾ, ಮಾಬುಖಾನ್ ಪಠಾಣ್, ಮಾಂತೇಶ್ ನೆಲೂಡಿ, ರವಿಗೌಡ ಪಾಟೀಲ, ಬಸಪ್ಪ ವಡ್ಡರ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-23-1829117939

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.