ಗದಗ: ‘ಮಳೆಯಿಂದ ಉಂಟಾಗುವ ಹಾನಿಗೆ ತ್ವರಿತವಾಗಿ ಸ್ಪಂದಿಸಿ, ಪರಿಹಾರ ಒದಗಿಸಬೇಕು. ವಿಳಂಬ, ನಿರ್ಲಕ್ಷ್ಯ ಮಾಡಿದರೆ ಸಹಿಸುವುದಿಲ್ಲ’ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ಕೋರ್ಟ್ ಹಾಲ್ನಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಕುಡಿಯುವ ನೀರಿನ ಪೂರೈಕೆ, ಮಳೆ ಹಾನಿ ಪರಿಹಾರ, ಕೃಷಿ ಚಟುವಟಿಕೆಗೆ ಬಿತ್ತನೆ ಬೀಜ ಹಾಗೂ ಗೊಬ್ಬರಗಳ ಲಭ್ಯತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು’ ಎಂದರು.

‘ಜನ ಹಾಗೂ ಜಾನುವಾರುಗಳ ಜೀವಹಾನಿ ತಡೆಯಲು ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು. ಮಳೆ ಹಾನಿಯ ಪ್ರಮಾಣ ಕಡಿಮೆ ಮಾಡಲು ತುರ್ತು ಸ್ಪಂದನೆ ಅಗತ್ಯವಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆ ವ್ಯತ್ಯಯವಾಗದಂತೆ ನಿಗಾ ವಹಿಸಬೇಕು. ಪ್ರವಾಹ ಉಂಟಾಗುವ ಪ್ರದೇಶಗಳನ್ನು ಗುರುತಿಸಿ, ಅಗತ್ಯವಿದ್ದರೆ ಅಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು’ ಎಂದು ಸೂಚಿಸಿದರು.

‘ಸಣ್ಣ ನೀರಾವರಿ ಇಲಾಖೆಯ 23 ಕೆರೆಗಳ ನಿರ್ವಹಣೆ ಹಾಗೂ ನೀರು ಸಂಗ್ರಹ ಸಾಮರ್ಥ್ಯ ವೃದ್ಧಿಗೆ ಅಗತ್ಯ ಕ್ರಮ ವಹಿಸಬೇಕು. ಕೆರೆಗಳಿಗೆ ನೀರು ತುಂಬಿಸುವುದು ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಬೇಕಾದ ಅನುದಾನಕ್ಕಾಗಿ ಪ್ರಸ್ತಾವ ಸಲ್ಲಿಸಬೇಕು. ಪ್ರವಾಹ ಸೇರಿದಂತೆ ತುರ್ತು ಪರಿಸ್ಥಿತಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ಅಗ್ನಿಶಾಮಕ ಇಲಾಖೆಗೆ ಅಗತ್ಯವಿರುವ ಬೋಟ್ಗಳ ಖರೀದಿಗೆ ಸೂಕ್ತ ಪ್ರಸ್ತಾವ ನೀಡಿ’ ಎಂದು ನಿರ್ದೇಶನ ನೀಡಿದರು.

‘ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಿಂದ 907 ವಿದ್ಯುತ್ ಕಂಬಗಳು ಹಾಗೂ 10 ಶಾಲಾ ಕೊಠಡಿಗಳು ಹಾನಿಗೀಡಾಗಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಮಾನದಂಡಗಳ ಪ್ರಕಾರ ಈ ಹಾನಿಯ ಅಂದಾಜು ಮೊತ್ತ ₹69.35 ಲಕ್ಷ ಆಗಿದೆ. 92 ರೈತರಿಗೆ ಸೇರಿದ ಅಂದಾಜು ₹6.70 ಲಕ್ಷ ಮೊತ್ತದ 34.58 ಎಕರೆಯ ತೋಟಗಾರಿಕೆ ಪ್ರದೇಶ ಹಾನಿಗೊಂಡಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

‘ಲಭ್ಯವಿರುವ ನೀರಿನ ಸಂಗ್ರಹದಿಂದ ಮುಂದಿನ 90 ದಿನಗಳವರೆಗೆ ಜಿಲ್ಲೆಯ ಜನರಿಗೆ ಕುಡಿಯುವ ನೀರು ಪೂರೈಸಲು ಸಾಧ್ಯವಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗುವ 63 ಗ್ರಾಮಗಳನ್ನು ಗುರುತಿಸಲಾಗಿದೆ. ಗದಗ–ಬೆಟಗೇರಿ ನಗರಸಭೆಯ 35 ವಾರ್ಡ್ಗಳು ಸೇರಿದಂತೆ ಜಿಲ್ಲೆಯ ಒಟ್ಟು 69 ವಾರ್ಡ್ಗಳನ್ನು ಸಮಸ್ಯಾತ್ಮಕ ಪ್ರದೇಶಗಳೆಂದು ಹೆಸರಿಸಲಾಗಿದೆ. ಸಮರ್ಪಕವಾಗಿ ನೀರು ಪೂರೈಕೆಗೆ ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.

‘ಮುಂಗಾರು ಹಂಗಾಮಿಗೆ 67,536 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆಯಿದ್ದು, ಈವರೆಗೆ 18,963 ಮೆಟ್ರಿಕ್ ಟನ್ ಮಾರಾಟವಾಗಿದೆ. ಪ್ರಸ್ತುತ 14,688 ಮೆಟ್ರಿಕ್ ಟನ್ ದಾಸ್ತಾನು ಇದ್ದು, ಗೊಬ್ಬರ ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ’ ಎಂದು ಕೃಷಿ ಇಲಾಖೆ ಅಧಿಕಾರಿಗಳು ವಿವರಿಸಿದರು.

‘ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಅನಗತ್ಯವಾಗಿ ಇತರೆ ಗೊಬ್ಬರ ಖರೀದಿಸುವಂತೆ ಒತ್ತಾಯ ಮಾಡಬಾರದು. ಇಂತಹ ಪ್ರಕರಣಗಳು ಕಂಡುಬಂದರೆ ಸಂಬಂಧಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್. ದುರಗೇಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಿವೈಎಸ್ಪಿ ಮುರ್ತುಜಾ ಖಾದ್ರಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಡಿಡಿಪಿಐ ಆರ್.ಎಸ್. ಬುರಡಿ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಎಚ್.ಬಿ. ಹುಲಗಣ್ಣನವರ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ, ಕಾರ್ಮಿಕ ಇಲಾಖೆ ಜಿಲ್ಲಾ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-23-177853529

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.