ಗದಗ: ನಗರದಲ್ಲಿ ಎರಡು ದಿನ ಸುರಿದ ಬಿರುಗಾಳಿ ಸಹಿತ ಬಿರುಸು ಮಳೆಯಿಂದ ಅನೇಕ ಮನೆಗಳಿಗೆ ಹಾನಿಯಾಗಿದ್ದು, ಸರ್ಕಾರ ತಕ್ಷಣವೇ ಅವರಿಗೆ ಸೂರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಎಸ್ಡಿಪಿಐ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಮುಸ್ತಾಕ್ ಹೊಸ್ಮನಿ ಆಗ್ರಹಿಸಿದರು.

ಹಾನಿಗೊಳಗಾದ ಮನೆಗಳ ತುರ್ತು ದುರಸ್ತಿ ಮಾಡಿಸಿಕೊಡಬೇಕು. ಮೂಲಸೌಕರ್ಯಗಳನ್ನು ತಕ್ಷಣವೇ ಒದಗಿಸುವಂತೆ ಆಗ್ರಹಿಸಿ ಎಸ್ಡಿಪಿಐ ಪಕ್ಷದ ಗದಗ ವಿಧಾನಸಭಾ ಮತಕ್ಷೇತ್ರ ಸಮಿತಿ ವತಿಯಿಂದ ನಗರದ ಗಾಂಧಿ ವೃತ್ತದಿಂದ ನಗರಸಭೆ ಕಚೇರಿವರೆಗೆ ಪಾದಯಾತ್ರೆ ನಡೆಸಿ ಮಾತನಾಡಿದರು.

ನಗರಸಭೆ ಆಡಳಿತ ವ್ಯವಸ್ಥೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ಈಗಾಗಲೇ ನಗರದಾದ್ಯಂತ ಬೀದಿದೀಪ ವ್ಯವಸ್ಥೆ ಹದಗೆಟ್ಟಿದೆ. ಕಳಪೆ ಮಟ್ಟದ ರಸ್ತೆಗಳಿಂದ ಜನಜೀವನ ಅವ್ಯವಸ್ತವಾಗಿದೆ. ಇವುಗಳ ದುರಸ್ತಿಗೆ ಕ್ರಮವಹಿಸುವಂತೆ ಆಗ್ರಹಿಸಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.

ಪಕ್ಷದ ಕಾರ್ಯದರ್ಶಿ ಸಮೀರ್ ಕೊಟ್ಟೂರು, ಇಬ್ರಾಹಿಂ ಕುಂದರಪಿ, ಜಿಲ್ಹಾನಿ ಲಕ್ಕುಂಡಿ, ರಶೀದ್ ಕಟ್ಟಿಮನಿ, ಗದಗ ಜಿಲ್ಲಾ ಸಮಿತಿ ಉಪಾಧ್ಯಕ್ಷ ಹಾಗೂ ಹಿರಿಯ ಮುಖಂಡರು ಹಿದಾಯತುಲ್ಲಾ ಕಾಗದಗಾರ, ವಿಮೆನ್ ಇಂಡಿಯಾ ಮೂವ್ಮೆಂಟ್ ಅಧ್ಯಕ್ಷರಾದ ಸುಮಯ್ಯ ಬಳ್ಳಾರಿ ಹಾಗೂ ಗಂಗಿಮಡಿ ಸಾರ್ವಜನಿಕರು, ಸಂತ್ರಸ್ತರು, ಎಸ್ಡಿಪಿಐ ಕಾರ್ಯಕರ್ತರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-23-866135336

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.