ಗದಗ: ‘ಮತಾಂತರ ತಡೆಗಟ್ಟುವ ಉದ್ದೇಶದಿಂದ ತಾಂಡಾಗಳಲ್ಲಿ ಶೀಘ್ರದಲ್ಲೇ ಜಾಗೃತಿ ಕಾರ್ಯಕ್ರಮ, ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ಗೋರಸೇನಾ (ಬಂಜಾರ) ರಾಜ್ಯಾಧ್ಯಕ್ಷ ರವಿಕಾಂತ ಅಂಗಡಿ ಹೇಳಿದರು.

ಶಿರಹಟ್ಟಿ ತಾಲ್ಲೂಕಿನ ಮಜ್ಜೂರ ತಾಂಡಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಸಮಾಜದಲ್ಲಿ ಧರ್ಮರಕ್ಷಣೆ, ಸಾಂಸ್ಕೃತಿಕ ಜಾಗೃತಿ ಹಾಗೂ ಮತಾಂತರ ತಡೆಗೆ ಸಂಬಂಧಿಸಿದಂತೆ ವ್ಯಾಪಕ ಜನಜಾಗೃತಿ ಮೂಡಿಸುವುದು ಸಮಾವೇಶದ ಮುಖ್ಯ ಉದ್ದೇಶವಾಗಿದೆ’ ಎಂದು ತಿಳಿಸಿದರು.

‘ಲಕ್ಷ್ಮೇಶ್ವರ ತಾಲ್ಲೂಕಿನ ಆದರಳ್ಳಿ ತಾಂಡಾದಲ್ಲಿ ಚರ್ಚ್ ನಿರ್ಮಾಣ ಹಾಗೂ ಮತಾಂತರದ ಆರೋಪಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ತಾಂಡಾಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ‘ಚರ್ಚ್ ಹಠಾವೋ–ತಾಂಡಾ ಬಚಾವೋ’ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಧರ್ಮ, ಸಂಸ್ಕೃತಿ ರಕ್ಷಣೆ ಕಾರ್ಯ ನಡೆಯಲಿದೆ. ಈ ಕುರಿತು ಸಭೆ, ಚಿಂತನೆ ನಡೆಸಲಾಗುತ್ತಿದ್ದು, ತಾಂಡಾ ಜನರ ಸಹಕಾರ ಅತ್ಯವಶ್ಯಕ’ ಎಂದರು.

ಕೇಶರಟ್ಟಿ ಶಂಕರಲಿಂಗ ಮಠದ ಸೋಮಲಿಂಗ ಸ್ವಾಮೀಜಿ ಮಾತನಾಡಿ, ‘ಬಂಜಾರ ಸಮುದಾಯದ ಸಂಸ್ಕೃತಿ, ಪರಂಪರೆ ಹಾಗೂ ಧಾರ್ಮಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವ ಅಗತ್ಯವಿದೆ’ ಎಂದು ಹೇಳಿದರು.

‘ಯುವ ಸಮುದಾಯವು ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಅವುಗಳನ್ನು ತೊಡೆದು ಹಾಕಿ, ಯುವ ಪೀಳಿಗೆಯಲ್ಲಿ ಸಾಂಸ್ಕೃತಿಕ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸುವ ಮೂಲಕ ಸಮಾಜವನ್ನು ಮತ್ತಷ್ಟು ಸದೃಢಗೊಳಿಸಬೇಕು’ ಎಂದು ಕರೆ ನೀಡಿದರು.

ಮುಂಡರಗಿ ತಾಲ್ಲೂಕಿನ ವಿರುಪಾಪುರ ತಾಂಡಾ, ಶಿರಹಟ್ಟಿ ತಾಲ್ಲೂಕಿನ ಮಜ್ಜೂರ ತಾಂಡಾ, ಛಬ್ಬಿ ತಾಂಡಾ ಸೇರಿದಂತೆ ವಿವಿಧ ತಾಂಡಾಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಿದರು.

ಪರಮೇಶ ನಾಯ್ಕ, ಪೂರಪ್ಪ ನಾಯಕ, ತುಕಾರಾಮ ಲಮಾಣಿ, ಸುರೇಶ ಲಮಾಣಿ ಸೇರಿದಂತೆ ವಿರುಪಾಪುರ ತಾಂಡಾ, ಮಜ್ಜೂರ ತಾಂಡಾ, ಛಬ್ಬಿ ತಾಂಡಾದ ಪ್ರಮುಖರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-23-805477297

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.