ಗದಗ: ‘ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳ ಯಶಸ್ಸಿಗೆ ಸಮುದಾಯದ ಸಕ್ರಿಯ ಭಾಗವಹಿಸುವಿಕೆ, ಸ್ಥಳೀಯ ನಾಯಕತ್ವ ಹಾಗೂ ಸಮಗ್ರ ಯೋಜನಾ ಅನುಷ್ಠಾನ ಅಗತ್ಯವಾಗಿದೆ’ ಎಂದು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಉಮಾ ಮಹಾದೇವನ್ ಹೇಳಿದರು.

ಇಲ್ಲಿನ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಶನಿವಾರ ನಡೆದ ‘ಸ್ವಗ್ರಾಮ ಯೋಜನೆ’ ವಾರ್ಷಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಗ್ರಾಮಗಳ ಸಮಗ್ರ ಅಭಿವೃದ್ಧಿಗಾಗಿ ಶಿಕ್ಷಣ, ಆರೋಗ್ಯ, ಸ್ವಚ್ಛತೆ, ಜೀವನೋಪಾಯ ಮತ್ತು ಸಾಮಾಜಿಕ ಸಬಲೀಕರಣ ಕ್ಷೇತ್ರಗಳಲ್ಲಿ ನಿರಂತರವಾಗಿ ಕಾರ್ಯ ನಿರ್ವಹಿಸಬೇಕು. ಸ್ವಗ್ರಾಮ ಯೋಜನೆಯು ಗ್ರಾಮೀಣ ಅಭಿವೃದ್ಧಿಯ ಗುರಿಗಳನ್ನು ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ’ ಎಂದು ತಿಳಿಸಿದರು.

ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ವಿಷ್ಣುಕಾಂತ ಎಸ್. ಚಟಪಳ್ಳಿ ಮಾತನಾಡಿ, ‘ಗ್ರಾಮೀಣ ಭಾಗದ ಅಗತ್ಯತೆಗಳನ್ನು ಅರಿತು ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಶಾಶ್ವತ ಅಭಿವೃದ್ಧಿ ಸಾಧಿಸಬಹುದಾಗಿದೆ’ ಎಂದು ಹೇಳಿದ ಅವರು, ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ವಿಶ್ವವಿದ್ಯಾಲಯವು ಕೈಗೊಂಡಿರುವ ವಿವಿಧ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದರು.

ಕುಲಪತಿ ಸುರೇಶ್ ವಿ. ನಾಡಗೌಡರ ಮಾತನಾಡಿ, ‘ಸ್ವಗ್ರಾಮ ಯೋಜನೆಯ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಪೂರಕವಾದ ಹಲವಾರು ಕಾರ್ಯಕ್ರಮಗಳನ್ನು ವಿಶ್ವವಿದ್ಯಾಲಯ ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದೆ. ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಗ್ರಾಮಗಳ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿರುವುದು ಶ್ಲಾಘನೀಯ’ ಎಂದು ಹೇಳಿದರು.

ಪ್ರಕಾಶ್ ಭಟ್, ತಿಪ್ಪೇಸ್ವಾಮಿ ಕೆ.ಟಿ., ಎಚ್.ಎಸ್. ಆದಾಪುರ, ಗಿರೀಶ್, ಪ್ರಕಾಶ್ ಮಾಚೇನಹಳ್ಳಿ, ವಿಶ್ವವಿದ್ಯಾಲಯದ ಅಧ್ಯಾಪಕರು, ಸಂಶೋಧಕರು, ಸಿಬ್ಬಂದಿ, ಸ್ವಗ್ರಾಮ ಮಿತ್ರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-23-166628739

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.