ಗದಗ: ‘ಶಾಲೆ ಪ್ರಾರಂಭಕ್ಕೂ ಮೊದಲು ಶಾಲಾ ಕೊಠಡಿಗಳು, ಮೈದಾನ, ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಕ್ರಮವಹಿಸಬೇಕು’ ಎಂದು ಡಿಡಿಪಿಐ ಆರ್.ಎಸ್.ಬುರಡಿ ಸೂಚಿಸಿದರು.

2026–27ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕುರಿತು ಗದಗ ಶಹರದ ಎಲ್ಲ ಶಾಲೆಗಳ ಮುಖ್ಯೋಪಾಧ್ಯಾಯರ ಜತೆಗೆ ಸಭೆ ನಡೆಸಿ ಮಾತನಾಡಿದರು.

‘ಜೂನ್ 1ರಿಂದ ತರಗತಿಗಳು ಪ್ರಾರಂಭಗೊಳ್ಳಲಿವೆ. ಆ ದಿನ ಶಾಲಾ ಎಸ್ಡಿಎಂಸಿಯವರು, ಪಾಲಕರು, ಶಾಲಾ ಸಿಬ್ಬಂದಿ, ಹಳೆ ವಿದ್ಯಾರ್ಥಿಗಳು ಸೇರಿ ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಿಸುವಂತೆ ಸಿಂಗರಿಸಬೇಕು. ಮಕ್ಕಳಿಗೆ ಹೂವು, ಸಿಹಿ ನೀಡಿ ಸ್ವಾಗತಿಸುವುದು, ಪುಷ್ಪವೃಷ್ಟಿ, ಬಲೂನ್ ಹಾರಿಸುವ ಮೂಲಕ ಹೀಗೆ ಒಂದಿಲ್ಲೊಂದು ವಿಶೇಷ ರೀತಿಯಲ್ಲಿ ಮಕ್ಕಳನ್ನು ಸ್ವಾಗತಿಸಲು ಯೋಜಿಸಬೇಕು’ ಎಂದು ಸಲಹೆ ನೀಡಿದರು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೆ.ಡಿ.ಬಡಿಗೇರ ಮಾತನಾಡಿ, ‘ಸರ್ಕಾರಿ ಶಾಲೆಗಳ ಉಳಿವಿಗಾಗಿ ಎಲ್ಲರೂ ಕೈಜೋಡಿಸಬೇಕು. ಈ ಬಾರಿ ದಾಖಲಾತಿಯನ್ನು ಕನಿಷ್ಠ ಶೇ 15ರಷ್ಟು ಹೆಚ್ಚಿಗೆ ಮಾಡಲು ಶ್ರಮಿಸಬೇಕು’ ಎಂದು ಸೂಚಿಸಿದರು.

ವಿವಿಧ ಸಂಘಟನೆಯ ಪದಾಧಿಕಾರಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ನಂತರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳು, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ತರಲು ಶ್ರಮಿಸಿದ ಗದಗ ಶಹರದ ಶಿಕ್ಷಕರನ್ನು ಅಭಿನಂದಿಸಲಾಯಿತು.

ಬಿಆರ್ಪಿ ಯರಗುಡಿ ಕಾರ್ಯಕ್ರಮ ನಿರೂಪಿಸಿದರು. ಶ್ಯಾಮ ಲಾಂಡೆ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-23-1577267140

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.