ಶಿಕ್ಷಕರು ಪೋಷಕರು ತಮ್ಮ ಮಕ್ಕಳಲ್ಲಿನ ಆಸಕ್ತಿ ಅಭಿರುಚಿ ಗುರುತಿಸಿ ಪ್ರೋತ್ಸಾಹ ನೀಡಿದರೆ ಮುಂದೆ ಅವರು ಜೀವನದಲ್ಲಿ ಮಹತ್ತರ ಸಾಧನೆ ಮಾಡುತ್ತಾರೆ.
ಬಸವರಾಜ ಹೊರಟ್ಟಿ ಸಭಾಪತಿ
ಇಲಾಖೆಗೆ ಹೊಸ ಚೈತನ್ಯ
‘ಎಚ್.ಕೆಪಾಟೀಲರು ಪ್ರವಾಸೋದ್ಯಮ ಇಲಾಖೆ ಸಚಿವರಾದ ಮೇಲೆ ಪುರಾತತ್ವ ಇಲಾಖೆಗೆ ಹೊಸ ಚೈತನ್ಯ ರೂಪರೇಷೆ ನೀಡಿದ್ದಾರೆ’ ಎಂದು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಯುಕ್ತ ದೇವರಾಜ್ ಎ. ತಿಳಿಸಿದರು. ‘ರಾಜ್ಯದಲ್ಲಿ 25 ಸಾವಿರ ಸ್ಮಾರಕಗಳಿವೆ. ಇವುಗಳನ್ನು ಕೆಲವು ಎನ್‌ಜಿಒಗಳು ದತ್ತು ಪಡೆದು ಅಭಿವೃದ್ಧಿ ಮಾಡಲು ಮುಂದೆ ಬಂದಿವೆ. ಈವರೆಗೆ ರಾಜ್ಯದಲ್ಲಿ 14450 ಗ್ರಾಮಗಳ ಸ್ಮಾರಕ ಶಿಲ್ಪಗಳ ಜಿಯೋ ಟ್ಯಾಗಿಂಗ್ ಮಾಡಲಾಗಿದೆ. ಇನ್ನು ಕಾರ್ಯ ನಿರಂತರ ನಡೆದಿದೆ. ಈ ಕಾರ್ಯ ಶೀಘ್ರದಲ್ಲೇ ಪೂರ್ಣಮಾಡುವ ಬಗ್ಗೆ ಕೆಲಸ ನಡೆದಿದೆ. ಪೂರ್ಣವಾದರೆ ದೇಶದಲ್ಲೇ ಜಿಯೊ ಟ್ಯಾಂಗಿಂಗ್ ಮಾಡಿದ ರಾಜ್ಯ ಕರ್ನಾಟಕ ಆಗುತ್ತದೆ. ಇದು ನಮ್ನ ಹೆಮ್ಮೆ’ ಎಂದರು. ಪ್ರಾಚ್ಯ ಪ್ರಜ್ಞೆ ಸ್ಪರ್ಧೆ ಒಂದು ವಿಶೇಷ ಕಾರ್ಯಕ್ರಮ. ಇದು ಮಕ್ಕಳಲ್ಲಿನ ಪ್ರತಿಭೆಯ ಅನಾವರಣಕ್ಕೆ ವೇದಿಕೆ ಒದಗಿಸಲಿದೆ ಎಂದು ತಿಳಿಸಿದರು.