ಗದಗ: ‘ಈ ನಾಡು ಕಂಡ ಶ್ರೇಷ್ಠ ಮಠಾಧೀಶರಾಗಿದ್ದ ಸಿದ್ಧಲಿಂಗ ಸ್ವಾಮೀಜಿ ಮಾದರಿ ವ್ಯಕ್ತಿತ್ವ ಹೊಂದಿದ್ದರು. ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ನಗರದ ತೋಂಟದಾರ್ಯ ಮಠದ 2026ನೇ ಸಾಲಿನ ಜಾತ್ರಾ ಮಹೋತ್ಸವದ ಲಘುರಥೋತ್ಸವ ವೇದಿಕೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

‘ಎಲ್ಲೆಡೆ ಹಿಂಸೆ, ಅನಾಚಾರ ಹೆಚ್ಚುತ್ತಿರುವ ಹಾಗೂ ಸಂಬಂಧಗಳಿಗೆ ಬೆಲೆ ಇಲ್ಲದಂತಾಗಿರುವ ಈ ಕಾಲದಲ್ಲಿ ಮಠಗಳು ಹಾಗೂ ಮಠಾಧೀಶರ ಪಾತ್ರ ಮಹತ್ವದ್ದಾಗಿದೆ. ಸಮಾಜದಲ್ಲಿ ಸುಶಿಕ್ಷಿತರ ಪ್ರಮಾಣ ಹೆಚ್ಚಾಗುತ್ತಿದ್ದರೂ ಸಹ ಅದೇ ಪ್ರಮಾಣದಲ್ಲಿ ಜಾತೀಯತೆ ಕೂಡ ಹೆಚ್ಚುತ್ತಿರುವುದು ವಿಷಾದದ ಸಂಗತಿ. 12ನೇ ಶತಮಾನದ ಶರಣರ ತತ್ವಗಳನ್ನು ಅಳವಡಿಸಿಕೊಂಡಾಗ ಜಾತಿಯ ಸಂಕೋಲೆಯಿಂದ ಹೊರಬರಲು ಸಾಧ್ಯವಾಗುತ್ತದೆ’ ಎಂದರು.

ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, ‘ತೋಂಟದ ಸಿದ್ಧಲಿಂಗ ಶ್ರೀಗಳ ನೆನಪು ಇಂದಿಗೂ ನನಗೆ ಚೈತನ್ಯದ ಚಿಲುಮೆಯಾಗಿದೆ. ಹುಟ್ಟಿದ ಮಗುವಿನ ಮುಗ್ಧತೆಯನ್ನು ಕೊನೆಯವರೆಗೂ ಕಾಪಿಟ್ಟುಕೊಂಡಿದ್ದ ಅಪರೂಪರ ಯತಿಗಳು ಅವರು. ಬದುಕಿನ ಸವಾಲುಗಳನ್ನು ಯಾವ ರೀತಿ ಎದುರಿಸಬೇಕು ಎನ್ನುವುದಕ್ಕೆ ಅವರು ಪ್ರೇರಣೆಯಾಗಿದ್ದಾರೆ’ ಎಂದರು.

‘ಬಸವೇಶ್ವರರ ಕಾಯಕ ತತ್ವವನ್ನು ಅಳವಡಿಸಿಕೊಂಡಿರುವ ಬಸವರಾಜ ಹೊರಟ್ಟಿಯವರು ನೇರ ನುಡಿಯ ನಾಯಕರಾಗಿದ್ದು, ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಶಿಕ್ಷಕರ ಧ್ವನಿಯಾಗಿರುವ ಅವರಿಗೆ ಸನ್ಮಾನ ಮಾಡಿದ್ದು ಅತ್ಯಂತ ಪ್ರಸ್ತುತ. ದಯವೇ ಧರ್ಮದ ಮೂಲವಯ್ಯಾ ಎಂಬ ಬಸವೇಶ್ವರರ ಆದರ್ಶವನ್ನು ಅಳವಡಿಸಿಕೊಂಡರೆ ಸದ್ಯ ನಡೆಯುತ್ತಿರುವ ಜಾಗತಿಕ ಮಟ್ಟದ ಸಾವು-ನೋವುಗಳನ್ನು ತಪ್ಪಿಸಬಹುದಾಗಿದೆ’ ಎಂದರು.

ಬಾಗಲಕೋಟೆ ಟೀಕಿನಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಸಂಡೂರ ಪ್ರಭುದೇವರ ವಿರಕ್ತಮಠದ ಪ್ರಭು ಸ್ವಾಮೀಜಿ, ಕೋಲಶಾಂತೇಶ್ವರ ಮಠದ ಶಾಂತಲಿಂಗ ದೇಶಿಕೇಂದ್ರ ಸ್ವಾಮೀಜಿ, ಬಾಚಿಗೊಂಡನಗಳ್ಳಿ ತೋಂಟದಾರ್ಯ ಶಾಖಾಮಠದ ಶಿವಮಹಾಂತ ಸ್ವಾಮೀಜಿ, ಆಳಂದದ ಕೋರಣೇಶ್ವರ ಸ್ವಾಮೀಜಿ, ಬಸವಬೆಳವಿಯ ಶರಣಬಸವದೇವರು ಸಮ್ಮುಖ ವಹಿಸಿದ್ದರು.

ಧಾರವಾಡದ ರತಿಕಾ ನೃತ್ಯ ನಿಕೇತನ ಕಲಾವಿದರಾದ ನಾಗರತ್ನಾ ಹಡಗಲಿ ತಂಡದವರಿಂದ ವಚನ ನೃತ್ಯ ರೂಪಕ ಜರುಗಿತು.

ಮಾಜಿ ಸಚಿವ ಎಸ್.ಎಸ್.ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರಡಗಿ, ಕಿರಣ ಭೂಮಾ, ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್.ಎಸ್.ಪಟ್ಟಣಶೆಟ್ಟರ ವೇದಿಕೆಯಲ್ಲಿದ್ದರು.

ತೋಂಟದಾರ್ಯ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ವಿನಾಯಕ ಮಾನ್ವಿ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-23-1722990997

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.