ಗದಗ: ‘ಅವಳಿ ನಗರದಲ್ಲಿ 80ಕ್ಕೂ ಅಧಿಕ ಕೊಳಗೇರಿ ಪ್ರದೇಶಗಳಿದ್ದು ಇದರಲ್ಲಿ 48 ಗುಡಿಸಲು ಪ್ರದೇಶಗಳನ್ನು ಸ್ಲಂ ಕಾಯ್ದೆ 1973ರ ಪ್ರಕಾರ ಸ್ಲಂ ಎಂದು ಘೋಷಣೆ ಮಾಡಲಾಗಿದೆ. ಆದರೆ, ಈ ಸ್ಥಳಗಳಿಗೆ ಮೂಲಸೌಲಭ್ಯ ಒದಗಿಸುವಲ್ಲಿ ನಗರಸಭೆ ಸಂಪೂರ್ಣ ವಿಫಲವಾಗಿದೆ’ ಎಂದು ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಆರ್.ಮಾನ್ವಿ ಟೀಕಿಸಿದರು.

ಗದಗ-ಬೆಟಗೇರಿ ನಗರದ ಕೊಳಗೇರಿಗಳ ಅಭಿವೃದ್ಧಿ ವಿಚಾರದಲ್ಲಿ ನಗರಸಭೆ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸ್ಲಂ ಜನಾದೋಲನ-ಕರ್ನಾಟಕ ಹಾಗೂ ಗದಗ ಜಿಲ್ಲಾ ಸ್ಲಂ ಸಮಿತಿ ಪದಾಧಿಕಾರಿಗಳು ಶುಕ್ರವಾರ ಪೌರಾಯುಕ್ತರಿಗೆ ಮನವಿ ಸಲ್ಲಿಸಿ ಮಾತನಾಡಿದರು.

‘2014ರಿಂದ ಗದಗ-ಬೆಟಗೇರಿ ನಗರದ ವಸತಿರಹಿತ ಕುಟುಂಬಗಳಿಗೆ ಸರ್ಕಾರದಿಂದ ಮನೆಗಳನ್ನು ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಹಾಗೂ ನಗರಸಭೆ ಮುಂದೆ ಅನೇಕ ಬಾರಿ ಹೋರಾಟಗಳನ್ನು ನಡೆಸಲಾಗಿದೆ. ಆದರೆ ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭದಲ್ಲಿ ನಗರಸಭೆ ಸಿಬ್ಬಂದಿ ಮಾಡಿರುವ ಎಡವಟ್ಟುಗಳಿಂದಾಗಿ 348 ವಸತಿರಹಿತ ಕುಟುಂಬಗಳು ಈಗಲೂ ತೊಂದರೆ ಅನುಭವಿಸುವಂತಾಗಿದೆ’ ಎಂದು ದೂರಿದರು.

‘ಸ್ಥಳೀಯ ಶಾಸಕರು 2019ರಲ್ಲಿ ಎಲ್ಲಾ 348 ಕುಟುಂಬಗಳಿಗೆ ಮನೆ ಮಂಜೂರಾತಿ ಪತ್ರಗಳನ್ನು ಹಂಚಿಕೆ ಮಾಡಿದಾರೆ. ಆದರೆ ಮನೆ ಹಂಚಿಕೆ ಮಾಡುವ ಸಂದರ್ಭದಲ್ಲಿ ನೈಜ ಫಲಾನುಭವಿಗಳನ್ನು ಕಡೆಗಣಿಸಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಿಳಾ ಸಮಿತಿ ಅಧ್ಯಕ್ಷೆ ಪರ್ವಿನಾಬಾನು ಹವಾಲ್ದಾರ, ಮುಖಂಡ ಶರಣಪ್ಪ ಸೂಡಿ ಮಾತನಾಡಿ, ನಗರದ ಸಾವಿರಾರು ಸ್ಲಂ ನಿವಾಸಿಗಳೊಂದಿಗೆ ಶೀಘ್ರವೇ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಸ್ಲಂ ಸಮಿತಿ ಕಾರ್ಯದರ್ಶಿ ಅಶೋಕ ಕುಸಬಿ, ಉಪಾಧ್ಯಕ್ಷ ಅಶೋಕ ಕುಡತಿನ್ನಿ, ಮುಖಂಡರಾದ ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಫೈರುಜಾ ನಾಗನೂರ, ಶಿವಪ್ಪ ಹಾತಲಗೇರಿ, ಮೆಹಬೂಬಸಾಬ ಬಳ್ಳಾರಿ, ಖಾಜಾಸಾಬ ಇಸ್ಮಾಯಿಲನವರ, ಗೌಸಸಾಬ ಅಕ್ಕಿ, ಸಾಕ್ರುಬಾಯಿ ಗೋಸಾವಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-23-1543986706

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.