ಗದಗ: ನಗರದ ಲಯನ್ಸ್ ಭವನದಲ್ಲಿ ಭಾನುವಾರ ಬೆಳಿಗ್ಗೆ 9ಕ್ಕೆ ರಾಜ್ಯಮಟ್ಟದ ಕನ್ನಡ ನುಡಿಸಿರಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಧಾರವಾಡದ ಚೇತನ ಫೌಂಡೇಶನ್, ಬೆಂಗಳೂರಿನ ಗಂಧದ ಗುಡಿ ಕನ್ನಡ ಸಂಘ, ಬೆಂಗಳೂರಿನ ಕರ್ನಾಟಕ ರಾಜ್ಯ ಲೇಖಕಿಯರ ಸಂಘ ಗದಗ ಜಿಲ್ಲಾ ಘಟಕ ಹಾಗೂ ಬೆಂಗಳೂರಿನ ಶರಣೆ ಅಕ್ಕಮಹಾದೇವಿ ಕದಳಿಶ್ರೀ ವೇದಿಕೆ ಗದಗ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಈ ಸಮ್ಮೇಳನದಲ್ಲಿ ಸಾಹಿತ್ಯಿಕ ಚರ್ಚೆ, ಸಂವಾದ, ಪುಸ್ತಕ ಮೇಳ, ರಾಜ್ಯಮಟ್ಟದ ಕವಿಗೋಷ್ಠಿ, ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಜರುಗಲಿವೆ.

ಬೆಳಿಗ್ಗೆ 9.15ಕ್ಕೆ ಸಮ್ಮೇಳನದ ಸರ್ವಾಧ್ಯಕ್ಷೆ ಸಾಹಿತಿ ರತ್ನಾ ಗಿರೋಸಾ ಬದಿ ಅವರನ್ನು ನಗರದ ಮಹಾತ್ಮ ಗಾಂಧಿ ವೃತ್ತದಿಂದ ಲಯನ್ಸ್ ಭವನದವರೆಗೆ ಮೆರವಣೆಗೆ ಮೂಲಕ ಕರೆ ತರಲಾಗುವುದು.

ನಂತರ ಬಾಗಲಕೋಟೆಯ ಹಿರಿಯ ಸಾಹಿತಿ ಪ್ರಕಾಶ ಖಾಡೆ ಅವರು ಪುಸ್ತಕ ಮೇಳ ಉದ್ಘಾಟಿಸುವರು. ಕನ್ನಡ ಸಾಹಿತ್ಯ ಪರಿಷತ್ತಿನ ಗದಗ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಡಾ.ಶಿವಪ್ಪ ಕುರಿ ಸಮ್ಮೇಳನವನ್ನು ಉದ್ಘಾಟಿಸುವರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ‘ಕದಳಿಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಗುವುದು.

ಬೆಳಿಗ್ಗೆ 10.30ಕ್ಕೆ ನಡೆಯುವ ರಾಜ್ಯ ಮಟ್ಟದ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಬೆಂಗಳೂರಿನ ಸಾಹಿತಿ ಶಿವಶಾಂತಾ ಬಿಸನಳ್ಳಿ ವಹಿಸುವರು. ವಿಜಯಪುರದ ಸಾಹಿತಿ ರವಿ ನಾಟೇಕರ ಚಾಲನೆ ನೀಡುವರು. ಹಳಿಯಾಳದ ಪ್ರೊ.ಪ್ರಕಾಶ ಸುಣಗಾರ ಆಶಯ ನುಡಿಗಳನ್ನಾಡುವರು.

ತುಮಕೂರಿನ ಬಿ.ರಂಗಸ್ವಾಮಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸುವರು. ಸಾಹಿತಿ ಶಿವಲಿಂಗಪ್ಪ ಅಣ್ಣಿಗೇರಿ ಸಮಾರೋಪ ನುಡಿಗಳನ್ನಾಡುವರು. ಪ್ರೊ.ಎಲ್.ಬಿ.ಲಕ್ಕಮ್ಮನವರ ಸಮ್ಮೇಳನದ ನಿರ್ಣಯ ಮಂಡಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-23-77999267

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.