ಗದಗ: ತಾಲ್ಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಕುಡಿಯುವ ನೀರಿಗೆ ಆಸರೆಯಾಗಿದ್ದ ಕೆರೆ ಸಂಪೂರ್ಣ ಬತ್ತಿ ಹೋಗಿದ್ದು, ಗ್ರಾಮ ಪಂಚಾಯಿತಿ ನಿರ್ಲಕ್ಷ್ಯದಿಂದಾಗಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಜೆಜೆಎಂ ಯೋಜನೆ ಹಳ್ಳ ಹಿಡಿದಿದ್ದು, ತುಂಗಭದ್ರಾ ನದಿಯಿಂದ ಕುಡಿಯುವ ನೀರು ಸರಬರಾಜು ಯೋಜನೆ ವೈಫಲ್ಯದಿಂದಾಗಿ ಗ್ರಾಮಸ್ಥರಿಗೆ ನೀರು ಸಿಗದಾಗಿದೆ. ವಾರಕ್ಕೆ ಒಮ್ಮೆ ಬರುತ್ತಿದ್ದು ನೀರು ಬೇಸಿಗೆಯಾದ ಕಾರಣ ಸಮರ್ಪಕವಾಗಿ ಸಿಗುತ್ತಿಲ್ಲ.

ಗ್ರಾಮದಲ್ಲಿ ಮೂರು ವಾರ್ಡ್ಗಳಿದ್ದು ವಾರಕ್ಕೆ ಒಮ್ಮೆ ಕೇವಲ ಮೂರ್ನಾಲ್ಕು ಕೊಡ ನೀರು ಬರುತ್ತಿದ್ದು, ದನಕರುಗಳಿಗೆ ಹಾಗೂ ಬಳಕೆ ಮಾಡಲು ಸಾಕಾಗುತ್ತಿಲ್ಲ. ಕುಡಿಯುವ ನೀರಿನ ಬಗ್ಗೆ ಮಹಿಳೆಯರು ಸೇರಿದಂತೆ ಸಾರ್ವಜನಿಕರು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶಿವಲೀಲಾ ಗೂಳಪ್ಪನವರ ಗಮನಕ್ಕೆ ತಂದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಸಾರ್ವಜನಿಕರಿಗೆ ಹಾರಿಕೆ ಉತ್ತರ ನೀಡುತ್ತಾರೆ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

‘ಸರ್ಕಾರ ಕುಡಿಯುವ ನೀರಿಗೆ ಕೋಟ್ಯಂತರ ರೂಪಾಯಿ ಮೀಸಲಿಟ್ಟು, ರಾಜ್ಯದ ಯಾವುದೇ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನೀರಿನ ಸಮಸ್ಯೆ ಕುರಿತು ವರದಿಯಾದರೆ ನೇರವಾಗಿ ಜಿಲ್ಲಾಧಿಕಾರಿಗಳನ್ನೇ ಹೊಣೆ ಮಾಡಬೇಕಾಗುತ್ತದೆ ಎಂದು ಈಗಾಗಲೇ ಸಿಎಂ ಸಿದ್ಧರಾಮಯ್ಯ ಅವರು ಆದೇಶಿಸಿದ್ದಾರೆ. ಇಷ್ಟಾದರೂ ಕೂಡ ಯಾವುದೇ ಅಧಿಕಾರ ಇತ್ತಕಡೆ ಗಮನಹರಿಸಿದೆ ಕೈ ಕಟ್ಟಿಕೊಂಡು ಕುಳಿತಿದ್ದಾರೆ’ ಎಂದು ರೈತ ಮುಖಂಡ ಯಲ್ಲಪ್ಪ ಬಾಬರಿ ಕಿಡಿಕಾರಿದ್ದಾರೆ.

ಈಗಾಗಲೇ ವರದಿಯಾದ ಪ್ರಕಾರ ಗದಗ ತಾಲ್ಲೂಕಿನ 17 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ. ನಮ್ಮ ಗ್ರಾಮವೂ ಅದರಲ್ಲಿ ಒಂದಾಗಿದ್ದು ನೀರಿನ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಇನ್ನೂ ಯಾವುದೇ ಕೈಗೊಂಡಿಲ್ಲ ಎಂದು ಹರಿಹಾಯ್ದರು.

ಇದೇ ರೀತಿ ನೀರಿನ ಸಮಸ್ಯೆ ಮುಂದುವರಿದರೆ ಗ್ರಾಮಸ್ಥರ ಆಕ್ರೋಶ ಸ್ಫೋಟಗೊಳ್ಳಲಿದೆ ಎಂದು ಅವರು ಎಚ್ಚರಿಸಿದ್ದಾರೆ.

ರೈತ ಸಂಘದ ಗ್ರಾಮ ಘಟಕದ ಅಧ್ಯಕ್ಷ ಹುಚ್ಚೀರಪ್ಪ ಜೋಗಿನ, ಶರಣಪ್ಪ ಜೋಗಿನ, ಬಾಳಪ್ಪ ಗಂಗರಾತ್ರಿ, ಹನುಮಪ್ಪ ತಳವಾರ, ಕಪ್ಪತ್ತಪ್ಪ ಸೊಂಪೂರ, ರಾಯಣ್ಣ ಕಂಡ್ರಿ, ಗೀರಿಶ ಗುಡ್ಲಾನೂರ ಸೇರಿದಂತೆ ಹಲವರು ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-23-1010250217

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.