ಗದಗ: ತೀವ್ರ ಕುಡಿಯುವ ನೀರಿನ ಅಭಾವ ಎದುರಿಸುತ್ತಿರುವ ಗದಗ ತಾಲ್ಲೂಕಿನ ತಿಮ್ಮಾಪುರ ಗ್ರಾಮಕ್ಕೆ ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಆಯುಕ್ತರಾದ ಡಾ.ಎಂ. ವಿ. ವೆಂಕಟೇಶ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂಪೂರ್ಣ ಬತ್ತಿ ಹೋಗಿರುವ ಕುಡಿಯುವ ನೀರಿನ ಕೆರೆಯನ್ನು ವೀಕ್ಷಿಸಿ, ಗ್ರಾಮಸ್ಥರ ಜೊತೆ ಸಮಾಲೋಚನೆ ನಡೆಸಿ ನೀರಿನ ಸಮಸ್ಯೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು. ಗ್ರಾಮಸ್ಥರು ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಯುಕ್ತರಲ್ಲಿ ಮನವಿ ಮಾಡಿಕೊಂಡರು.

ಈ ಗ್ರಾಮದ ಸಾರ್ವಜನಿಕರು ನೀರಿಗಾಗಿ ಪರದಾಡುತ್ತಿದ್ದಾರೆ. ಶೀಘ್ರದಲ್ಲೇ ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಎಂದು ವೆಂಕಟೇಶ ಅವರು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮತ್ತು ಜೆಜೆಎಂ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದ ಆಯುಕ್ತರು, ಕೆಲಸದಲ್ಲಿನ ವಿಳಂಬದ ಬಗ್ಗೆ ಜೆಜೆಎಂ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ತುಂಗಭದ್ರಾ ನದಿಯಿಂದ ಬರುವ ನೀರಿನ ಮಟ್ಟದ ಬಗ್ಗೆ ವಿವರ ಪಡೆದರು. ‘ಜೆಜೆಎಂ ಮೂಲಕ ದಿನಕ್ಕೆ ಎಷ್ಟು ಸಾವಿರ ಲೀಟರ್ ನೀರು ಈ ಗ್ರಾಮಕ್ಕೆ ಸರಬರಾಜು ಮಾಡುತ್ತೀರಿ‘ ಎಂದು ಆಯುಕ್ತರು ಪ್ರಶ್ನಿಸಿದರು. ಅದಕ್ಕೆ ಜಲಸಂಪನ್ಮೂಲ ಅಧಿಕಾರಿಗಳು ‘ಮೂರು ಲಕ್ಷ ಲೀಟರ್ ನೀರನ್ನು ಸರಬರಾಜು ಮಾಡುತ್ತೇವೆ’ ಎಂದು ಉತ್ತರಿಸಿದರು. ಕೂಡಲೇ ಮಧ್ಯಪ್ರವೇಶಿಸಿದ ಗ್ರಾಮಸ್ಥರು, ‘ಅಧಿಕಾರಿಗಳು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ನಮಗೆ ವಾರಕ್ಕೆ ಒಮ್ಮೆ 3-4 ಕೊಡ ನೀರು ಕೂಡ ಸರಿಯಾಗಿ ಬರುತ್ತಿಲ್ಲ’ ಎಂದು ಆಯುಕ್ತರಿಗೆ ದೂರಿದರು.

ಪರ್ಯಾಯ ವ್ಯವಸ್ಥೆ ಬಗ್ಗೆ ಚರ್ಚಿಸಿದಾಗ ಲಕ್ಕುಂಡಿ ಮಾರ್ಗ ಮಧ್ಯದಲ್ಲಿರುವ ಕೆಸರಳ್ಳ ಬಳಿ ಕೊಳವೆಬಾವಿ ಕೊರೆಸಿದರೆ ನೀರಿನ ಸಮಸ್ಯೆ ಶಾಶ್ವತವಾಗಿ ಬಗೆಹರಿಯುತ್ತದೆ ಎಂದು ಗ್ರಾಮಸ್ಥರು ಆಯುಕ್ತರಿಗೆ ಸಲಹೆ ನೀಡಿದರು.

ಗ್ರಾಮಸ್ಥರ ಅಹವಾಲು ಆಲಿಸಿದ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳು, ಈ ಬಗ್ಗೆ ಒಂದು ವಾರದೊಳಗೆ ಸಮಸ್ಯೆಯನ್ನು ಪರಿಹರಿಸಿಕೊಡುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ, ಮಲ್ಲಿಕಾರ್ಜುನ ಇದ್ಲಿ, ಬಾಳಪ್ಪ ಗಂಗರಾತ್ರಿ, ಯಲ್ಲಪ್ಪ ಹಾಗಲದ, ರಾಮಣ್ಣ ಖಂಡ್ರೆ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರು, ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-23-1556097739

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.