ಗದಗ: ‘ಇಲ್ಲಿನ ಜಗದ್ಗುರು ತೋಂಟದಾರ್ಯ ಮಠದ ತೋಂಟದಾರ್ಯ ಜಾತ್ರಾ ಮಹೋತ್ಸವ ಏಪ್ರಿಲ್ 1ರಿಂದ 4ರ ವರೆಗೆ ನಡೆಯಲಿದೆ’ ಎಂದು ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ವಿನಾಯಕ ಮಾನ್ವಿ ಹೇಳಿದರು.

‘ಜಾತ್ರೆ ಅಂಗವಾಗಿ ಬಸವ ಮಹಾಂತ ಶ್ರೀಗಳಿಂದ ಪ್ರತಿನಿತ್ಯ ಸಂಜೆ ಬಸವಾದಿ ಶರಣರ ವಚನ ದರ್ಶನ ಪ್ರವಚನ, ಷಟ್ಸ್ಥಲ ಧ್ವಜಾರೋಹಣ ನೆರವೇರಿಸಲಾಗಿದೆ. ಮಾರ್ಚ್ 29ರಂದು ಕಳಸಾರೋಹಣ ನೆರವೇರಲಿದೆ’ ಎಂದು ನಗರದ ತೋಂಟದಾರ್ಯ ಮಠದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಏ.1ರಂದು ಸಂಜೆ 6.30ಕ್ಕೆ ಜಾತ್ರೆ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಲಿದ್ದು, ಶಿವಮೊಗ್ಗ ಜಿಲ್ಲೆಯ ಆನಂದಪುರ ಮುರುಘಾಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಚಿವ ಎಂ.ಬಿ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಗ್ರಂಥ ಬಿಡುಗಡೆ ಮಾಡುವರು. ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ, ಮುಂಡರಗಿ ತೋಂಟದಾರ್ಯ ಶಾಖಾ ಮಠದ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ, ಅಭಿನವ ಮೃತ್ಯುಂಜಯ ಸ್ವಾಮೀಜಿ, ಸಿದ್ದೇಶ್ವರ ಮಠದ ಶಿವಾನಂದ ಸ್ವಾಮೀಜಿ, ಬೈರನಟ್ಟಿಯ ಶಾಂತಲಿಂಗ ಸ್ವಾಮೀಜಿ, ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ಬಸವಮಹಾಂತ ಸ್ವಾಮೀಜಿ ಉಪಸ್ಥಿತರಿರುವರು’ ಎಂದು ತಿಳಿಸಿದರು.

‘ಏ.2ರಂದು ಸಂಜೆ 4ಕ್ಕೆ ತೋಂಟದ ಸಿದ್ಧರಾಮ ಸ್ವಾಮೀಜಿ ಅವರು ಎಸ್.ಎಸ್.ಕಳಸಾಪುರಶೆಟ್ಟರ ಮನೆಯಿಂದ ಪಾದಯಾತ್ರೆ ಮೂಲಕ ಮಠಕ್ಕೆ ಆಗಮಿಸುವರು. ಸಂಜೆ 6.30ಕ್ಕೆ ಮಹಾರಥೋತ್ಸವ ಜರುಗಲಿದೆ’ ಎಂದು ತಿಳಿಸಿದರು.

‘ರಾತ್ರಿ 7.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಚಿಕ್ಕೋಡಿಯ ಕಿರಣ ಕಮತೆ, 2025ನೇ ಸಾಲಿನ ಇಕ್ವೇಟರ್ ಪ್ರಶಸ್ತಿ ಪಡೆದ ಬೀಬಿ ಫಾತಿಮಾ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷರಿಗೆ ಗೌರವ ಸನ್ಮಾನ ನಡೆಯಲಿದೆ. ರೋಣ ಶಾಸಕ ಜಿ.ಎಸ್. ಪಾಟೀಲ, ಮಾಜಿ ಶಾಸಕ ಡಿ.ಆರ್. ಪಾಟೀಲ, ಮಾಜಿ ಸಚಿವ ಎಸ್.ಎಸ್. ಪಾಟೀಲ, ಮಾಜಿ ಸಂಸದ ಐ.ಜಿ. ಸನದಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲಾ ಕದಳಿ ಮಹಿಳಾ ವೇದಿಕೆಯಿಂದ ವಚನ ನೃತ್ಯ, ಮೃತ್ಯುಂಜಯ ಹಿರೇಮಠ ಅವರಿಂದ ವಚನ ಸಂಗೀತ ಕಾರ್ಯಕ್ರಮ ನಡೆಯಲಿದೆ’ ಎಂದು ತಿಳಿಸಿದರು.

‘ಏ.3ರಂದು ಸಂಜೆ 4ಕ್ಕೆ ಬಸವೇಶ್ವರ ನಗರದ ಕುಬಸದ ಬಂಧುಗಳ ಮನೆಯಿಂದ ಮಠದವರೆಗೆ ತೋಂಟದ ಸಿದ್ಧರಾಮ ಶ್ರೀಗಳ ಮೆರವಣಿಗೆ ನಡೆಯಲಿದೆ. ಸಂಜೆ 6ಕ್ಕೆ ಲಘು ರಥೋತ್ಸವ ಜರುಗುವುದು. ರಾತ್ರಿ 7.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸನ್ಮಾನ ನಡೆಯಲಿದೆ. ಸಚಿವ ಎಚ್.ಕೆ. ಪಾಟೀಲ, ಸಂಸದ ಬಸವರಾಜ ಬೊಮ್ಮಾಯಿ, ನರಗುಂದ ಶಾಸಕ ಸಿ.ಸಿ. ಪಾಟೀಲ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ನಾಗರತ್ನಾ ಹಡಗಲಿ ಅವರಿಂದ ನೃತ್ಯ ರೂಪಕ ನಡೆಯಲಿದೆ’ ಎಂದು ತಿಳಿಸಿದರು.

‘ಏ.4ರಂದು ಸಂಜೆ 6.30ಕ್ಕೆ ಮಂಗಲೋತ್ಸವ ನಡೆಯಲಿದೆ. ರಾಷ್ಟ್ರಮಟ್ಟದ ವಿಕಸಿತ ಭಾರತ ಯುವ ಸಂಸತ್ ಮಹೋತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಮಾನ್ಯಾ ಶೆಟ್ಟಿ ಅವರಿಗೆ ಸನ್ಮಾನ, ಡಾ.ಎಂ.ಎಂ.ಕಲಬುರ್ಗಿ ಅಧ್ಯಯನ ಸಂಸ್ಥೆಯಿಂದ ‘ವಚನ ನಿರ್ವಚನ’ ಗ್ರಂಥ ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ’ ಎಂದು ತಿಳಿಸಿದರು.

ಜಾತ್ರಾ ಮಹೋತ್ಸವ ಸಮಿತಿಯ ಪದಾಧಿಕಾರಿಗಳಾದ ಶಿವಯ್ಯ ನಾಲ್ವತವಾಡಮಠ, ಸುಧಾ ಹುಚ್ಚಣ್ಣವರ, ಸುಭಾಷ್ ಚನ್ನಪ್ಪನವರ, ಚೇತನ ಅಂಗಡಿ, ಎಂ.ಜಿ.ಹೂಗಾರ, ಚಂದ್ರಶೇಖರ ರಾಜೂರ, ಎಸ್.ವಿ.ಪವಾಡಿಗೌಡ್ರ, ಉಮೇಶಗೌಡ ಪಾಟೀಲ, ವೀರಣ್ಣ ಗಡಗಿ ಸೇರಿದಂತೆ ಜಾತ್ರಾ ಕಮಿಟಿ ಸದಸ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-23-509238350

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.