ಗದಗ: ‘ನಗರದ ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದಲ್ಲಿ ಅವಘಡ ಸಂಭವಿಸಿ 15ಕ್ಕೂ ಅಧಿಕ ಜನರು ಗಾಯಗೊಂಡಿರುವುದು ನೋವಿನ ಸಂಗತಿ. ಗಾಯಗೊಂಡವರು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುವೆ’ ಎಂದು ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.

‘ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡಬೇಕು ಎಂದು ಆಸ್ಪತ್ರೆಯ ವೈದ್ಯರಿಗೆ ಮನವಿ ಮಾಡಲಾಗಿದೆ. ಗಾಯಾಳುಗಳಿಗೆ ಎಲ್ಲ ರೀತಿಯಿಂದಲೂ ಉತ್ತಮ ಚಿಕಿತ್ಸೆ ನೀಡುತ್ತಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಎಲ್ಲರೂ ಗುಣಮುಖರಾಗುತ್ತಿದ್ದು ಚಿಂತಿಸುವ ಅಗತ್ಯ ಇಲ್ಲ ಎಂದಿದ್ದಾರೆ’ ಎಂದು ತಿಳಿಸಿದ್ದಾರೆ.

‘ಗದಗ ಜಿಲ್ಲಾಧಿಕಾರಿ ಕೂಡ ಈ ವಿಷಯದಲ್ಲಿ ವಿಶೇಷ ಆಸಕ್ತಿವಹಿಸಿ ಜಿಲ್ಲಾ ಆಸ್ಪತ್ರೆ ವೈದ್ಯರೊಂದಿಗೆ ಸಮಾಲೋಚಿಸುವುದಲ್ಲದೇ ಚಿಕಿತ್ಸೆಯಲ್ಲಿ ಯಾವುದೇ ಲೋಪಗಳಾಗದಂತೆ ಕಾಳಜಿ ವಹಿಸಲು ಸೂಚಿಸಿದ್ದಾರೆ. ಹೀಗಾಗಿ ಯಾರೂ ಆಂತಕಪಡುವ ಅಗತ್ಯ ಇಲ್ಲ. ಈ ವಿಷಯದಲ್ಲಿ ಜಾತ್ರಾ ಮಹೋತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಆಡಳಿತ ಸಿಬ್ಬಂದಿಯವರು ಎಲ್ಲ ಕಡೆಗೂ ಗಮನಹರಿಸಿ ಗಾಯಾಳುಗಳ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ. ಸಾಧ್ಯವಿದ್ದ ಎಲ್ಲ ಅನುಕೂಲ ಮಾಡಿಕೊಡಲೂ ಕೂಡ ತಿಳಿಸಲಾಗಿದೆ’ ಎಂದು ಶ್ರೀಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-23-699380323

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.