ಗದಗ: ಇಲ್ಲಿನ ಇತಿಹಾಸ ಪ್ರಸಿದ್ಧ ಜಗದ್ಗುರು ತೋಂಟದಾರ್ಯ ಮಠದ ಲಘುರಥೋತ್ಸವವು ಶುಕ್ರವಾರ ಸಂಜೆ 6.30ಕ್ಕೆ ನಡೆಯಲಿದೆ.

ಮಠದ ಸಂಪ್ರದಾಯದಂತೆ ಸಂಜೆ 4ಕ್ಕೆ ಬಸವೇಶ್ವರ ನಗರದ ಕುಬಸದ ಬಂಧುಗಳ ಮನೆಯಿಂದ ಮೆರವಣಿಗೆ ಮೂಲಕ ಸಿದ್ಧರಾಮ ಸ್ವಾಮೀಜಿ ಮಠಕ್ಕೆ ಆಗಮಿಸುವರು.

ರಾತ್ರಿ 7.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬಾಗಲಕೋಟೆ ಟೀಕಿನಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಸಂಡೂರ ವಿರಕ್ತಮಠದ ಪ್ರಭು ಸ್ವಾಮೀಜಿ, ಅರಸಿಕೇರಿಯ ಶಾಂತಲಿಂಗ ದೇಶಿಕೇಂದ್ರ ಸ್ವಾಮೀಜಿ, ಬಾಚಿಗೊಂಡನಗಳ್ಳಿ ತೋಂಟದಾರ್ಯ ಶಾಖಾಮಠದ ಶಿವಮಹಾಂತ ಸ್ವಾಮೀಜಿ ಸಮ್ಮುಖ ವಹಿಸುವರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸನ್ಮಾನ ನೆರವೇರುವುದು. ಮುಖ್ಯ ಅತಿಥಿಗಳಾಗಿ ಸಚಿವ ಎಚ್.ಕೆ.ಪಾಟೀಲ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಸಿ.ಸಿ.ಪಾಟೀಲ ಭಾಗವಹಿಸುವರು.

ಧಾರವಾಡದ ರತಿಕಾ ನೃತ್ಯ ನಿಕೇತನ ಅಕಾಡೆಮಿಯಿಂದ ವಚನ ನೃತ್ಯ ರೂಪಕ ಜರುಗುವುದು ಎಂದು ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ವಿನಾಯಕ ಮಾನ್ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-23-1660020876

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.