ಗದಗ: ‘ಸರ್ಕಾರವು ಈಚೆಗೆ ನೂತನ ಪ್ರವಾಸೋದ್ಯಮ ನೀತಿ ರೂಪಿಸಿದ್ದು, ಪ್ರವಾಸೋದ್ಯಮದ ಅಭಿವೃದ್ಧಿ ಯಲ್ಲಿ ಹೋಟೆಲ್ ಒಡೆಯರು ವಿಶೇಷ ಆಸಕ್ತಿ ವಹಿಸಿ ಸರ್ಕಾರದ ಕಾರ್ಯಕ್ರಮಗ ಳೊಂದಿಗೆ ಕೈಜೋಡಿಸಿದರೆ ಈ ಭಾಗದ ಅಭಿವೃದ್ಧಿಯಲ್ಲಿ ಮಹತ್ವದ ಬದ ಲಾವಣೆಗಳು ಆಗುತ್ತವೆ’ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ನಗರದ ನೂತನ ಬಸ್ ನಿಲ್ದಾಣದ ಎದುರಿಗೆ ನೂತನವಾಗಿ ನಿರ್ಮಾಣಗೊಂಡಿರುವ ಹೋಟೆಲ್ ಒಡೆಯರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

‘ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಬಾಂಧವರು ಈ ಭಾಗದಲ್ಲಿ ಹೋಟೆಲ್ಗಳನ್ನು ಆರಂಭಿಸಿ ಶುಚಿ, ರುಚಿಯಾದ ಆಹಾರ ಪದಾರ್ಥಗಳನ್ನು ಸಾರ್ವಜನಿಕರಿಗೆ ನೀಡುತ್ತಾ ನೂರಾರು ಕಾರ್ಮಿಕರಿಗೆ ಉದ್ಯೋಗಾವ ಕಾಶ ನೀಡಿದ್ದಾರೆ. ಈ ಭಾಗದಲ್ಲಿ ಅನೇಕ ಸಮಾಜಸೇವಾ ಕಾರ್ಯಗಳನ್ನು ಕೈಗೊಂಡು ಯಕ್ಷಗಾನದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ, ಈ ಭಾಗದ ಸಾಂಸ್ಕೃತಿಕ ಶ್ರೀಮಂತಿಕೆ ಹೆಚ್ಚಿಸಿದ್ದಾರೆ’ ಎಂದರು.

‘ಉತ್ತರ ಕರ್ನಾಟಕದ ಆತಿಥ್ಯ ಮತ್ತು ಆಹಾರ ಸಂಸ್ಕೃತಿ ಪ್ರಸಾರದಲ್ಲಿ ಹೋಟೆಲ್ ಒಡೆಯರ ಕೊಡುಗೆ ಅಪಾರ ವಾಗಿದೆ. ಸಾಮಾನ್ಯ ಉಪಾಹಾರಗಳೊಂದಿಗೆ ಉತ್ತರ ಕರ್ನಾಟಕದ ವಿಶೇಷ ತಿನಿಸುಗಳಾದ ರೊಟ್ಟಿ, ಮಿರ್ಚಿಯಂತಹ ಖಾದ್ಯಗಳನ್ನು ಪ್ರತಿಯೊಂದು ಹೋಟೆಲ್ ನವರು ಪ್ರಾರಂಭಿಸಿ, ಇಲ್ಲಿನ ಆಹಾರ ಸಂಸ್ಕೃತಿಯನ್ನು ಉಳಿಸಿ, ಬೆಳಸಬೇಕು’ ಎಂದರು.

ಕರ್ನಾಟಕ ರಾಜ್ಯ ಹೋಟೆಲ್ ಮಾಲೀಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಕೆ.ಶೆಟ್ಟಿ ಮಾತನಾಡಿ, ‘ಹೋಟೆಲ್ ಒಡೆಯರು ಸಂಘಟಿತರಾಗಿ ಪ್ರಸ್ತುತ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಬೇಕಾಗಿದೆ. ಉತ್ತಮ ಆಹಾರ ಮತ್ತು ಆತಿಥ್ಯ ನೀಡುವುದರೊಂದಿಗೆ ಹೋಟೆಲ್ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಲಾ ಗಿದ್ದು, ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಒಡೆಯರು ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದರು.

ವಿಧಾನಪರಿಷತ್ ಸದಸ್ಯ ಪ್ರೊ. ಎಸ್.ವಿ.ಸಂಕನೂರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ, ಗೌರವಾಧ್ಯಕ್ಷ ರಾಜೀವ ಶೆಟ್ಟಿ, ಸಂಘದ ಪದಾಧಿಕಾರಿಗಳಾದ ರಾಘವೇಂದ್ರರಾವ್, ಎಂ.ಮಧುಕರ ಶೆಟ್ಟಿ, ಶೇಖರ ನಾಯ್ಡು, ಗುರುರಾಜ ಉಪಾಧ್ಯಾಯ ಇದ್ದರು.

ಅನಘಾ ಕುಲಕರ್ಣಿ ಪ್ರಾರ್ಥನೆ ಹಾಡಿದರು. ಸಂಘದ ಕೋಶಾಧ್ಯಕ್ಷ ಜಯಪಾಲ್ ಶೆಟ್ಟಿ ಸ್ವಾಗತಿಸಿದರು. ಅಧ್ಯಕ್ಷ ಎಚ್.ವಿಶ್ವನಾಥ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದತ್ತಪ್ರಸನ್ನ ಪಾಟೀಲ ನಿರೂಪಿಸಿದರು. ಉಪಾಧ್ಯಕ್ಷ ಶಂಕರ ಹಾನಗಲ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-23-120573570

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.