ಗದಗ: ‘ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವೇಳೆ ಪಾರದರ್ಶಕವಾಗಿ ಪಟ್ಟಿ ತಯಾರಿಸುವಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ (ಬಿ.ಎಲ್.ಒ) ಪಾತ್ರ ಪ್ರಮುಖವಾಗಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ್ ಕೆ.ಆರ್. ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026ರ ಮ್ಯಾಪಿಂಗ್ ಕುರಿತು ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದರು.

‘ಭಾರತದ ಚುನಾವಣಾ ಆಯೋಗವು ಕರ್ನಾಟಕ ರಾಜ್ಯದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026ರ ವೇಳಾಪಟ್ಟಿಯನ್ನು ಈಗಾಗಲೆ ಪ್ರಕಟಿಸಿದೆ. ಇಸಿಐ ನೆಟ್ ತಂತ್ರಾಂಶದಲ್ಲಿ ಮತದಾರ ಪಟ್ಟಿ ದತ್ತಾಂಶವು ಜೂನ್ 16ರಂದು ಫ್ರೀಜ್ ಆಗಲಿದೆ. ಅಷ್ಟರಲ್ಲಿ ಜಿಲ್ಲೆಗೆ ಸಂಬಂಧಿಸಿದ 2002ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯ ಪೂರ್ಣಗೊಳಿಸಬೇಕಾಗಿದೆ’ ಎಂದರು.

‘ಬಿ.ಎಲ್.ಒಗಳು ಮತಗಟ್ಟೆ ವ್ಯಾಪ್ತಿಯ ಮನೆ ಮನೆಗೆ ತೆರಳಿ ಮತದಾರರೊಂದಿಗೆ ವಿನಮ್ರತೆಯಿಂದ ವರ್ತಿಸಿ, ಮಾಹಿತಿ ಪಡೆದುಕೊಳ್ಳಬೇಕು’ ಎಂದು ಚುನಾವಣಾ ತಹಶೀಲ್ದಾರ್ ಸಂತೋಷ ಹಿರೇಮಠ ಹಾಗೂ ಜಿಲ್ಲಾ ಮಟ್ಟದ ಮಾಸ್ಟರ್ ತರಬೇತುದಾರ ಬಿ.ಜಿ. ಗಿರಿತಮ್ಮಣ್ಣವರ ತಿಳಿಸಿದರು.

ಮತದಾರರ ನೋಂದಣಾಧಿಕಾರಿ ಗಂಗಪ್ಪ ಎಂ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಎಸ್.ಡಿ. ಪಾಟೀಲ, ಜಿಲ್ಲೆಯ ಸಹಾಯಕ ಮತದಾರರ ನೋಂದಣಾಧಿಕಾರಿಗಳು, ತಹಶೀಲ್ದಾರರು, ಬಿ.ಎಲ್.ಒಗಳು ಹಾಗೂ ಬಿ.ಎಲ್.ಒ ಮೇಲ್ವಿಚಾರಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-23-770869360

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.