ಗದಗ: ಕೇಂದ್ರ ಸರ್ಕಾರದಿಂದ ಜಾರಿಗೆ ಬಂದಿರುವ ಹೊಸ ಘನ ತ್ಯಾಜ್ಯ ನಿರ್ವಹಣಾ ನಿಯಮಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಪರಿಸರ ಸಂರಕ್ಷಣೆಗೆ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳ ಸಹಭಾಗಿತ್ವ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಘನತ್ಯಾಜ್ಯ ನಿರ್ವಹಣೆ ನಿಯಮಗಳು– 2026ರ ಅನುಷ್ಠಾನ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.‘ಕೇಂದ್ರ ಸರ್ಕಾರದ ಘನ ತ್ಯಾಜ್ಯ ವಸ್ತುಗಳ ನಿಯಮಗಳು-2026ರ ಅನ್ವಯ ಜಿಲ್ಲೆಯ ಎಲ್ಲ ಸಾರ್ವಜನಿಕರು, ಮನೆಗಳು ಹಾಗೂ ವ್ಯಾಪಾರೋದ್ಯಮಿಗಳು ತಮ್ಮ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕಸವನ್ನು ಕಡ್ಡಾಯವಾಗಿ ನಾಲ್ಕು ವಿಭಾಗಗಳಾಗಿ ವಿಂಗಡಿಸಿ ನಗರಸಭೆಯ ಕಸ ಸಂಗ್ರಹಣಾ ವಾಹನಗಳಿಗೆ ನೀಡುವಂತೆ ಕ್ರಮವಹಿಸಬೇಕು’ ಎಂದರು.

‘ಕಸವನ್ನು ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ, ವಿಶೇಷ ಕಾಳಜಿ ತ್ಯಾಜ್ಯ ಎಂದು ಪ್ರತ್ಯೇಕಿಸಬೇಕು. ಅಡುಗೆ ಮನೆಯ ತ್ಯಾಜ್ಯ, ತರಕಾರಿ, ಮಾಂಸದ ತ್ಯಾಜ್ಯ, ಹಣ್ಣು ಹೂವು, ಹಾಗೂ ಕೊಳೆಯುವ ವಸ್ತುಗಳನ್ನು ಹಸಿ ತ್ಯಾಜ್ಯದ ವಿಭಾಗದಲ್ಲಿ; ಪ್ಲಾಸ್ಟಿಕ್, ಬಟ್ಟೆ, ಕಬ್ಬಿಣ, ರಬ್ಬರ್ ಮತ್ತು ಮರದ ವಸ್ತುಗಳನ್ನು ಒಣ ತ್ಯಾಜ್ಯದ ವಿಭಾಗದಲ್ಲಿ ನೀಡಬೇಕು. ಡೈಪರ್ಸ್, ಸ್ಯಾನಿಟರಿ ನ್ಯಾಪಕಿನ್ಗಳಂತಹ ವಸ್ತುಗಳನ್ನು ಸ್ಯಾನಿಟರಿ ತ್ಯಾಜ್ಯ ಎಂದು ಪ್ರತ್ಯೇಕಿಸಬೇಕು. ಇನ್ನುಳಿದಂತೆ ಪೇಂಟ್ ಡಬ್ಬಗಳು, ಔಷಧ ಬಾಟಲಿಗಳು, ಇ ವೇಸ್ಟ್, ಬಲ್ಬ್, ಹಳೆಯ ಬ್ಯಾಟರಿ ಹಾಗೂ ಬಳಸಿದ ಸಿರಿಂಜ್ ಮತು ಬ್ಯಾಂಡೇಜ್ಗಳನ್ನು ವಿಶೇಷ ತ್ಯಾಜ್ಯದ ಅಡಿಯಲ್ಲಿ ನೀಡಲು ಸೂಚಿಸಲಾಗಿದೆ’ ಎಂದರು.ಜಿಲ್ಲೆಯಲ್ಲಿ ಬೃಹತ್ ಕಸ ಉತ್ಪಾದಕರನ್ನು ಗುರುತಿಸಬೇಕು. ದಿನಕ್ಕೆ 100 ಕೆ.ಜಿ.ಗಿಂತ ಹೆಚ್ಚು ಕಸ ಉತ್ಪಾದಿಸುವ ಅಥವಾ ಪ್ರತಿ ನಿತ್ಯ 40 ಸಾವಿರ ಲೀಟರ್ಗಿಂತ ಹೆಚ್ಚು ನೀರು ಬಳಸುವ, 20 ಸಾವಿರ ಚದರ ಮೀಟರ್ಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ಸಂಸ್ಥೆಗಳು ಈ ನಿಯಮದಡಿ ಬರುತ್ತವೆ. ಹಾಸ್ಟೆಲ್ಗಳು, ಮಾಲ್ಗಳು, ರೆಸ್ಟೋರೆಂಟ್ಗಳು, ಕಲ್ಯಾಣ ಮಂಟಪಗಳು, ಅಪಾರ್ಟ್ಮೆಂಟ್ಗಳು ಇದರ ವ್ಯಾಪ್ತಿಗೆ ಬರುತ್ತಿದ್ದು ಅಂತಹವುಗಳನ್ನು ಗುರುತಿಸಿ ಕಡ್ಡಾಯವಾಗಿ ವೆಬ್ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಳ್ಳಲು ತಿಳಿಸಬೇಕು. ಹೊಸ ಘನ ತ್ಯಾಜ್ಯ ನಿರ್ವಹಣೆ ನಿಯಮಗಳು 2026 ಹಾಗೂ ವಿಲೇವಾರಿ ಕುರಿತು ಸೂಕ್ತ ಮಾರ್ಗದರ್ಶನ ನೀಡಬೇಕು’ ಎಂದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ ಮಾತನಾಡಿ. ‘ಘನತ್ಯಾಜ್ಯ ನಿರ್ವಹಣೆ ನಿಯಮಗಳು 2026ರ ನಿಯಮಗಳು ಏಪ್ರಿಲ್ 1ರಿಂದ ಜಾರಿಗೆ ಬಂದಿದೆ. ಎಲ್ಲಾ ರಾಜ್ಯಗಳು ಮತ್ತು ಸ್ಥಳೀಯ ಸಂಸ್ಥೆಗಳು ತಮ್ಮದೇ ಆದ ರಾಜ್ಯ ನೀತಿಯನ್ನು ಅಂತಿಮಗೊಳಿಸಲು ಸೆ.30 ಕೊನೆಯ ದಿನಾಂಕವಾಗಿದೆ. ಅಕ್ಟೋಬರ್ 30ರ ವೇಳೆಗೆ ನಗರ ಪ್ರದೇಶಗಳಲ್ಲಿ ಇರುವ ಹಳೆಯ ಕಸದ ರಾಶಿಗಳ ನಿರ್ವಹಣೆ ಭೌಗೋಳಿಕ ಮ್ಯಾಪಿಂಗ್ ಮೂಲಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. 2027ರ ಅಕ್ಟೋಬರ್ 31ರ ವೇಳೆ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಕಸ ನಿರ್ವಹಣೆಗೆ ಸಂಬಂಧಿಸಿದ ಉಪ-ಕಾಯ್ದೆಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಚಳಗೇರಿ, ಪರಿಸರ ಅಧಿಕಾರಿ ಲೋಹಿತ್ಕುಮಾರ್ ಪಿ.ಜೆ., ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ, ಗದಗ ಬೆಟಗೇರಿ ನಗರಸಭೆಯ ಕಾರ್ಯಕಾರಿ ಎಂಜಿನಿಯರ್ ಆನಂದ ಬದಿ, ಕೊಟ್ರೇಶ್, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಆರೋಗ್ಯ ನಿರೀಕ್ಷಕರು, ಆರೋಗ್ಯ ಇಲಾಖೆ, ಪರಿಸರ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-23-1969648133

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.