ನರೇಗಲ್: ‘ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರು ಆರಂಭಿಸಿದ ಸ್ತ್ರೀ ಶಿಕ್ಷಣ ಚಳವಳಿ ಸಾರ್ಥಕ್ಯ ಕಂಡಿದೆ. ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು, ಪುರುಷರಿಗೆ ಸಮನಾಗಿ ಸಾಧನೆ ಮಾಡುತ್ತಿರುವುದು ಇದಕ್ಕೆ ನಿದರ್ಶನ’ ಎಂದು ಗದಗ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ಸಹಾಯಕ ಪ್ರಾಧ್ಯಾಪಕಿ ಕಸ್ತೂರಿ ದಳವಾಯಿ ಹೇಳಿದರು.

ಸಮೀಪದ ಮಜರೆ ಕೋಡಿಕೊಪ್ಪದ ಅನ್ನದಾನೇಶ್ವರ ಶಿವಾನುಭವ ಮಂಟಪದಲ್ಲಿ ಹಾಲಕೆರೆಯ ಅನ್ನದಾನೇಶ್ವರ ಸಂಸ್ಥಾನಮಠ, ಅಕ್ಷರ ಭಾರತ ಪ್ರತಿಷ್ಠಾನ ಹಾಗೂ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿ ಆಶ್ರಯದಲ್ಲಿ ಈಚೆಗೆ ನಡೆದ 73ನೇ ಶಿವಾನುಭವ ಗೋಷ್ಠಿಯಲ್ಲಿ ಉಪನ್ಯಾಸ ನೀಡಿದರು.

‘12ನೇ ಶತಮಾನದಲ್ಲಿ ಶಿವಶರಣರು ಪ್ರತಿಪಾದಿಸಿದ ಲಿಂಗ ಸಮಾನತೆ, ಆನಂತರ ಫುಲೆ ದಂಪತಿ ಅನುಷ್ಠಾನಗೊಳಿಸಿದ ಸ್ತ್ರೀ ಶಿಕ್ಷಣ ಪರಿಕಲ್ಪನೆಗಳ ನಡುವೆ ಸಾಮ್ಯತೆ ಇದೆ’ ಎಂದರು.

ಕೆ.ವಿ.ಬಿ.ಎಂ. ಉಚಿತ ಪ್ರಸಾದ ನಿಲಯದ ಮೇಲ್ವಿಚಾರಕ ಸಿ.ಐ. ಮರಡಿಮಠ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಜೆ.ಬಿ. ಪಾಟೀಲ, ಪಾಪಣ್ಣವರ, ಮುಖ್ಯಶಿಕ್ಷಕ ಎಸ್.ಎನ್. ಹೂಲಗೇರಿ ಸೇರಿದಂತೆ ಪ್ರಸಾದ ನಿಲಯದ ವಿದ್ಯಾರ್ಥಿಗಳು, ಹೇಮರಡ್ಡಿ ಮಲ್ಲಮ್ಮ ಹಾಗೂ ಅಕ್ಕಮಹಾದೇವಿ ಮಹಿಳಾ ವಸತಿ ನಿಲಯದ ವಿದ್ಯಾರ್ಥಿನಿಯರು, ಶಿಕ್ಷಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-23-663757640

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.