ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗದಗ | ಜಿಲ್ಲಾಮಟ್ಟದ ಜನತಾ ದರ್ಶನ ಸೆ.18ಕ್ಕೆ

Published : 15 ಸೆಪ್ಟೆಂಬರ್ 2024, 13:26 IST
Last Updated : 15 ಸೆಪ್ಟೆಂಬರ್ 2024, 13:26 IST
ಫಾಲೋ ಮಾಡಿ
Comments

ಗದಗ: ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 18ರಂದು ಜಿಲ್ಲಾಡಳಿತ ಭವನದಲ್ಲಿ ನಡೆಯಲಿದೆ.

ಗದಗ ಜಿಲ್ಲಾಡಳಿತವು ಜನತಾದರ್ಶನ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸಿ ಸಾರ್ವಜನಿಕರ ಮನವಿಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮನವಿಗಳನ್ನು ಸ್ವೀಕರಿಸಲು ಆನ್‌ಲೈನ್ ಮೂಲಕ ಗದಗ ಜಿಲ್ಲಾಧಿಕಾರಿಗಳ ವೆಬ್‌ಸೈಟ್ https;//gadag.nic.in/ನಲ್ಲಿ ಅಳವಡಿಸಲಾದ ಜನತಾ ದರ್ಶನ -2024ನೇ ಲಿಂಕ್ ಕ್ಲಿಕ್ ಮಾಡಿ ಮನವಿ ಸಲ್ಲಿಸಲು ಸೆಪ್ಟೆಂಬರ್ 17ರ ವರೆಗೆ ಅವಕಾಶ ಕಲ್ಪಿಸಿದೆ.

ಸೆ.18ರಂದು ನಡೆಯುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪಾಲ್ಗೊಂಡು ಮನವಿ ಸಲ್ಲಿಸಲು ಅವಕಾಶವಿದೆ.

ಸ್ವೀಕೃತ ಮನವಿಗಳನ್ನು ಕ್ರೋಡೀಕರಿಸಿ ಆದ್ಯತೆ ಮೇರೆಗೆ ಸೆ.18ರಂದು ನಡೆಯುವ ಜಿಲ್ಲಾ ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು. ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT