ಗದಗ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಸೆ.18 ಹಾಗೂ 19ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಬುಧವಾರ ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಸೆ.19ರಂದು ಬೆಳಿಗ್ಗೆ 9ಕ್ಕೆ ನಗರದ ಕಳಸಾಪುರ ರಸ್ತೆಯಲ್ಲಿ ಸ್ನಾತಕೋತ್ತರ ಕೇಂದ್ರದ ಉದ್ಘಾಟನಾ ಸಮಾರಂಭ, ಬೆಳಿಗ್ಗೆ 10ಕ್ಕೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರಿಡಾಂಗಣದಲ್ಲಿ ಗದಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಬೆಳಿಗ್ಗೆ 11ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗದಗ ತಾಲ್ಲೂಕು ಮಟ್ಟದ ಗ್ಯಾರಂಟಿ ಸಮಿತಿ ಸಭೆಯಲ್ಲಿ ಭಾಗವಹಿಸುವರು. ಸಂಜೆ 4.30ಕ್ಕೆ ಗದಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಿತಿ ಸಭೆಯಲ್ಲಿ ಭಾಗವಹಿಸುವರು.
ಸಂಜೆ 5.30ಕ್ಕೆ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಲಕ್ಕುಂಡಿ ಪ್ರಾಧಿಕಾರದ ಸಭೆಯಲ್ಲಿ ಪಾಲ್ಗೊಳ್ಳುವರು. ರಾತ್ರಿ 10.20ಕ್ಕೆ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.