ಗಜೇಂದ್ರಗಡ: ‘ಬಗರ್ ಹುಕುಂ ಹಕ್ಕುಪತ್ರ ವಿತರಣೆಗೆ ಆಗ್ರಹಿಸಿ ತಾಲ್ಲೂಕು ವ್ಯಾಪ್ತಿಯ ಸುಮಾರು 16 ಗ್ರಾಮಗಳ ಸಾಗುವಳಿದಾರರು ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಅನೇಕ ಹೋರಾಟ ನಡೆಸಿ, ಇಲಾಖೆ ಅಧಿಕಾರಿಗಳು ಹಾಗೂ ಶಾಸಕರಿಗೆ ಮನವಿ ಸಲ್ಲಿಸಿದರೂ ಸಮಸ್ಯೆಗೆ ಪರಿಹಾರ ಸಿಗದಿರುವುದು ಆಡಳಿತದ ವೈಪಲ್ಯಕ್ಕೆ ಸಾಕ್ಷಿಯಾಗಿದೆ’ ಎಂದು ಎಸ್.ಎಫ್.ಐ ರಾಜ್ಯ ಘಟಕದ ಉಪಾಧ್ಯಕ್ಷ ಗಣೇಶ ರಾಠೋಡ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಬುಧವಾರ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ, ಸಾಗುವಳಿ ಚೀಟಿ ವಿತರಿಸದ ಸರ್ಕಾರದ ಕ್ರಮ ಖಂಡಿಸಿ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಉದ್ದೇಶಿಸಿ ಮಾತನಾಡಿದರು.

‘ಸುಮಾರು ವರ್ಷಗಳಿಂದ ಸುತ್ತಮುತ್ತಲಿನ ಗುಡ್ಡದಲ್ಲಿ ರೈತರು ಉಳುಮೆ ಮಾಡುತ್ತ ಜೀವನ ನಡೆಸುತ್ತಿದ್ದಾರೆ. ಸರ್ಕಾರ ಅವುಗಳನ್ನು ಗಣನೆಗೆ ತೆಗೆದುಕೊಂಡು ರೈತರಿಗೆ ಹಕ್ಕು ಪತ್ರ, ಸಾಗುವಳಿ ಚೀಟಿ ನೀಡಲು ನೀರಾಕರಿಸುತ್ತಿರುವುದನ್ನು ಸಂಘಟನೆ ಖಂಡಿಸುತ್ತದೆ. ಅಧಿಕಾರಿಗಳು ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಒತ್ತಾಯಿಸಿದರು.

ರೈತ ಸಂಘದ ಮುಖಂಡ ಪೀರು ರಾಠೋಡ ಮಾತನಾಡಿ, ‘ಸ್ಥಳೀಯ ಆಡಳಿತ ಹಾಗೂ ರಾಜಕೀಯ ಮುಖಂಡರು ರೈತರ ಸಮಸ್ಯೆಗಳನ್ನು ಬಗೆಹರಿಸುವ ಬದಲು ವ್ಯಯಕ್ತಿಕ ಹಿತಾಸಕ್ತಿಯಲ್ಲಿ ನಿರತರಾಗಿದ್ದಾರೆ’ ಎಂದು ಆರೋಪಿಸಿದರು.

ಈ ವೇಳೆ ರೂಪೇಶ ಮಾಳೋತ್ತರ, ಚಂದ್ರು ರಾಠೋಡ, ಚನ್ನಪ್ಪ ಗೂಗಲೋತ್ತರ, ಮೆಹಬೂಬ ಹವಾಲ್ದಾರ್, ಅನಿಲ ರಾಠೋಡ, ಬಾಲು ರಾಠೋಡ, ಶಿವಪ್ಪ ಮಾಳೋತ್ತರ, ಲೋಕಪ್ಪ ರಾಠೋಡ, ಈರಪ್ಪ ರಾಠೋಡ, ವೀರಭದ್ರಪ್ಪ ಮಾಳೋತ್ತರ, ರತ್ನಪ್ಪ ಮಾಳೋತ್ತರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-23-1368171899

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.