ಗಜೇಂದ್ರಗಡ: ಪಟ್ಟಣದಿಂದ ಗದಗ ನಗರಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಕೊಡಗಾನೂರು ಗ್ರಾಮದ ಹತ್ತಿರ ಗುರುವಾರ ಪಲ್ಟಿಯಾಗಿ ಒಬ್ಬರಿಗೆ ಗಂಭೀರ ಗಾಯವಾಗಿ, 8ಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗದಗ ನಗರದಿಂದ ಪಟ್ಟಣಕ್ಕೆ ಆಗಮಿಸುತ್ತಿದ್ದ ಇನ್ನೊಂದು ಬಸ್ಗೆ ಜಾಗಬಿಟ್ಟು ಕೊಡಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ವೃದ್ಧೆಯೊಬ್ಬರಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎನ್ನಲಾಗಿದೆ. ಉಳಿದ ಗಾಯಾಳುಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.

ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.