ಗಜೇಂದ್ರಗಡ: ಅಕ್ರಮ–ಸಕ್ರಮ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ ರೈತರ ಫಾರಂ ನಂ.50, 53, 57ರಲ್ಲಿ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸು ವಂತೆ ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಶುಕ್ರವಾರ ಧರಣಿ ನಡೆಸಲಾಯಿತು.

ಧರಣಿ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ ಕೆ.ಆರ್ ಭೇಟಿ ನೀಡಿ ಜೂನ್ 3ರಂದು ಜಿಲ್ಲಾಡಳಿತ ಭವನದಲ್ಲಿ ರೈತ ಮುಖಂಡರ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಶಾಸಕರೂ ಭಾಗವಹಿಸಲಿದ್ದಾರೆ. ಬಗರ್ ಹುಕ್ಕುಂ ಸಾಗುವಳಿದಾರರ ಸಾಗುವಳಿ ಚೀಟಿ ಕಲ್ಪಿಸಲು, ಅಕ್ರಮ–ಸಕ್ರಮ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದವರ ಬಾಕಿ ಅರ್ಜಿಗಳನ್ನು ವಿಲೇವಾರಿ ಮಾಡುವ ಬಗ್ಗೆ ಚರ್ಚಿಸಲಾಗುವುದು. ರೈತ ಮುಖಂಡರು, ರೈತರು ಭಾಗವಹಿಸಬೇಕು’ ಎಂದು ತಿಳಿಸಿದರು.

ಧರಣಿ ಬಳಿಕ ರೋಣದಲ್ಲಿರುವ ಶಾಸಕರ ಮನೆ ಚಲೋ ನಡೆಸಬೇಕೆಂಬ ನಿರ್ಧಾರವನ್ನು ಅಧಿಕಾರಿಗಳ ಭೇಟಿ ನೀಡಿ ಬಳಿಕ ರೈತರು ಕೈಬಿಟ್ಟು ಧರಣಿ ಅಂತ್ಯಗೊಳಿಸಿದರು.

ತಹಶೀಲ್ದಾರ್ ಕಿರಣಕುಮಾರ ಕುಲಕರ್ಣಿ, ಡಿವೈಎಸ್ಪಿ ಪ್ರಭುಗೌಡ ಕಿರೇದಳ್ಳಿ, ಸಿಪಿಐ ವಿಜಯಕುಮಾರ, ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ರೂಪೇಶ್ ಮಾಳೋತ್ತರ, ಕಾರ್ಯದರ್ಶಿ ಎಂ.ಎಸ್.ಹಡಪದ, ಮುಖಂಡರಾದ ಪೀರು ರಾಠೋಡ, ಬಾಲು ರಾಠೋಡ, ಚನ್ನಪ್ಪ ಗುಗಳೋತ್ತರ, ಅನಿಲ ರಾಠೋಡ, ಮೆಹಬೂಬ್ ಹವಾಲ್ದಾರ್, ವೀರೇಶ ಮಾಳೋತ್ತರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-23-791237516

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.