ಗಜೇಂದ್ರಗಡ: ‘ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಸ್ತ್ರೀ ಕುಲಕ್ಕೆ ಮಾದರಿಯಾಗಿದ್ದು, ಶ್ರದ್ಧೆ ಮತ್ತು ನಂಬಿಕೆಯಿಂದ ಏನನ್ನಾದರೂ ಸಾಧಿಸಬಹುದು ಎಂಬುದನ್ನು ಇಡೀ ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ’ ಎಂದು ರೋಣ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಿತುನ್ ಪಾಟೀಲ ಹೇಳಿದರು.

ಪಟ್ಟಣದ ರಡ್ಡಿ ಸಮಾಜದ ಕಚೇರಿಯಲ್ಲಿ ಭಾನುವಾರ ನಡೆದ ಹೇಮರಡ್ಡಿ ಮಲ್ಲಮ್ಮ ಜಯಂತಿ ಹಾಗೂ ಭಾವಚಿತ್ರ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗಜೇಂದ್ರಗಡ ತಾಲ್ಲೂಕು ರಡ್ಡಿ ಸಮಾಜದ ಅಧ್ಯಕ್ಷ ಹೇಮರಡ್ಡಿ ದೇವರಡ್ಡಿ ಮಾತನಾಡಿ, ಹೇಮರಡ್ಡಿ ಮಲ್ಲಮ್ಮ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಅವುಗಳನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.

ಸಮಾರಂಭದ ಬಳಿಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರ ಮೆರವಣಿಗೆ ನಡೆಯಿತು.

ದೊಡ್ಡನಗೌಡ ಅಮರೇಗೌಡ ಪಾಟೀಲ, ಬಸವರಡ್ಡಿ ಶಿರೋಳ, ಸುರೇಶ ಸಿದ್ದರಡ್ಡಿ, ಎಸ್.ಎಸ್.ರಡ್ಡೇರ, ಪಿ.ಸಿ.ಜೋಗರಡ್ಡಿ, ಗಂಗಾದರರೆಡ್ಡಿ ಬಯ್ಯಪಾಪುರ, ವಿ.ಎಂ.ಗಡ್ಡದ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-23-1009246702

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.