ಗಜೇಂದ್ರಗಡ: ಸಮೀಪದ ಲಕ್ಕಲಕಟ್ಟಿ ಗ್ರಾಮದಲ್ಲಿ ಭಾನುವಾರ ಗ್ರಾಮದೇವತೆ ನೂತನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಜಾತ್ರಾ ಮಹೋತ್ಸವ ನಡೆಯಿತು.

ಬೆಳಿಗ್ಗೆ ಗ್ರಾಮದ ಸುತ್ತ ಹಾಲು ಪೋಷಣೆ ಮಾಡಿ, ಸಕಲ ವಾದ್ಯಗಳು, ಸುಮಂಗಲೆಯರು ಆರತಿ ತಟ್ಟೆಯೊಂದಿಗೆ ಗ್ರಾಮದೇವಿಯನ್ನು ಸೀಮೆಯಿಂದ ಬನ್ನಿಗಿಡದ ಗಂಗಾಸ್ಥಳಕ್ಕೆ ಬರಮಾಡಿಕೊಂಡು ದೇವಿಗೆ ಸ್ನಾನ, ಸೀರೆ, ಹೂಗಳಿಂದ ಉಡಿತುಂಬಿ ಮಹಾ ಮಂಗಳಾರತಿ ಮಾಡಿದರು. ಬಳಿಕ ಮೆರವಣಿಗೆಯಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.

ನರಗುಂದ ಪತ್ರಿವನಮಠದ ಸಿದ್ದವೀರ ಶಿವಾಚಾರ್ಯರು, ಮುರನಾಳದ ಜಗನ್ನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್.ಪಾಟೀಲ ದೇವಸ್ಥಾನಕ್ಕೆ ಭೇಟಿ ನೀಡಿ ‘ಗ್ರಾಮದೇವತೆ ಜಾತ್ರೆಯನ್ನು ಎಲ್ಲರೂ ಸೇರಿಕೊಂಡು ಶಾಂತಿ, ಸಂಭ್ರಮದಿಂದ ಆಚರಿಸುವ ಮೂಲಕ ಗ್ರಾಮಸ್ಥರು ದೇವಿಯ ಕೃಪೆಗೆ ಪಾತ್ರರಾಗಬೇಕು’ ಎಂದರು.

ಸೋಮವಾರ ಹಾಗೂ ಮಂಗಳವಾರ ಗ್ರಾಮದೇವತೆ ಜಾತ್ರಾಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-23-1274916738

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.