ಗಜೇಂದ್ರಗಡ: ಸಮೀಪದ ಸೂಡಿ ಗ್ರಾಮದಲ್ಲಿ ಜುಕ್ತಿಹಿರೇಮಠದ 50ನೇ ವರ್ಷದ ರಥೋತ್ಸವದ ನಿಮಿತ್ಯ ನೂತನ ರಥದ ಲೋಕಾರ್ಪಣೆ ಅಂಗವಾಗಿ ಭಾನುವಾರ ನಡೆದ ವೀರಶೈವ ಧರ್ಮಪೀಠಗಳ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ವೈಭವದಿಂದ ನಡೆಯಿತು.

ಗ್ರಾಮದ ಹೊರ ವಲಯದಲ್ಲಿ ನಿರ್ಮಿಸಲಾಗಿದ್ದ ಬೃಹತ್ ಮಾನವ ಧರ್ಮ ಮಂಟಪದಿಂದ ಪ್ರಾರಂಭಗೊಂಡ ಬಾಳೆ ಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ, ಉಜ್ಜಯಿನಿ ಸದ್ಧರ್ಮ ಪೀಠದ ಸಿದ್ದಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ, ಶ್ರೀಶೈಲ ಪೀಠದ ಚನ್ನಸಿದ್ದರಾಮ ಸ್ವಾಮೀಜಿ, ವಾರಣಾಸಿ ಪೀಠದ ಚಂದ್ರಶೇಖರ ಸ್ವಾಮೀಜಿ ಹಾಗೂ ಮಲ್ಲಿಕಾರ್ಜುನ ವಿಶ್ವರಾಧ್ಯ ಸ್ವಾಮೀಜಿ ಅಡ್ಡಪಲ್ಲಕ್ಕಿ ಮಹೋತ್ಸವದ ಮೆರವಣಿಗೆಯಲ್ಲಿ ಡೊಳ್ಳು ಮೇಳ, ಭಜನಾ ಮೇಳ, ಚಂಡಿ ಮೇಳ, ವೀರಗಾಸೆ ಸೇರಿದಂತೆ ವಿವಿಧ ಮಂಗಲ ವಾದ್ಯಗಳೊಂದಿಗೆ ಪಂಚಪೀಠಗಳ ಧರ್ಮಧ್ವಜದ ಬಣ್ಣಗಳ ಸೀರೆಯುಟ್ಟ ಮಹಿಳೆಯರು ಪೂರ್ಣಕುಂಭ ಹೊತ್ತು ಪಾಲ್ಗೊಂಡರು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಅಡ್ಡಪಲ್ಲಕ್ಕಿ ಮಹೋತ್ಸವ ಜುಕ್ತಿಹಿರೇಮಠದ ಆವರಣದಲ್ಲಿ ಮಂಗಲಗೊಂಡಿತು.

ಮೆರವಣಿಗೆಯಲ್ಲಿ ನೆರೆದಿದ್ದ ಸಾವಿರಾರು ಭಕ್ತರು ‘ಮಾನವ ಧರ್ಮಕ್ಕೆ ಜಯವಾಗಲಿ’, ‘ಧರ್ಮದಿಂದಲೇ ವಿಶ್ವಕ್ಕೆ ಶಾಂತಿ’ ಎಂದು ಜಯಘೋಷಗಳನ್ನು ಹಾಕುತ್ತ ಸಾಗಿದರು.

ಜುಕ್ತಿ ಹಿರೇಮಠದ ಕೊಟ್ಟೂರ ಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ, ಉತ್ಸವ ಸಮಿತಿ ಅಧ್ಯಕ್ಷ ಎಸ್.ಡಿ.ಪಾಟೀಲ, ಗೌರವಾಧ್ಯಕ್ಷ ಸಿದ್ದಣ್ಣ ಮಾರನಬಸರಿ, ಕಾರ್ಯಾಧ್ಯಕ್ಷ ಶರಣಬಸಪ್ಪ ಗುಡಿಮನಿ, ಕಾರ್ಯದರ್ಶಿ ಶ್ರೀಕಾಂತ ಮಾರನಬಸರಿ, ವಿರುಪಾಕ್ಷಪ್ಪ ಕರಿಹೋಳಿ, ಬಸವರಾಜ ಬೆಲ್ಲದ ಸೇರಿದಂತೆ ವಿವಿಧ ಊರುಗಳ ಭಕ್ತರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-23-1201754399

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.