ಗಜೇಂದ್ರಗಡ: ಪಟ್ಟಣದಲ್ಲಿ ಕಾಮಗಾರಿ ಬಿಲ್ ಪಾವತಿಸಲು ಗುತ್ತಿಗೆದಾರರಿಂದ ₹3 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಲೋಕೋಪಯೋಗಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್ (ಎಇಇ) ಮಹೇಶ ರಾಠೋಡ ಎಂಬುವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

‘ಯಾದಗಿರಿ ಜಿಲ್ಲೆಯ ದ್ವಿತೀಯ ದರ್ಜೆ ಗುತ್ತಿಗೆದಾರ ಶರಣಪ್ಪ ಸಾಬಣ್ಣ ಅವರು ರೋಣ ತಾಲ್ಲೂಕಿನ ₹34 ಲಕ್ಷ ಮೌಲ್ಯದ ಕಾಮಗಾರಿಯನ್ನು ಆನ್ಲೈನ್ ಮೂಲಕ ಗುತ್ತಿಗೆ ಪಡೆದು 6 ತಿಂಗಳ ಹಿಂದೆಯೆ ಪೂರ್ಣಗೊಳಿಸಿದ್ದಾರೆ. ಕಾಮಗಾರಿ ಬಿಲ್ ಪಾವತಿಗೆ ಲೋಕೋಪಯೋಗಿ ಇಲಾಖೆಯ ಎಇಇ ಮಹೇಶ ರಾಠೋಡ ₹4.60 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದೆವು. ₹ 3 ಲಕ್ಷ ಮುಂಗಡವಾಗಿ ಹಣ ಪಡೆಯುತ್ತಿದ್ದ ಆರೋಪದ ಮೇಲೆ ಬಂಧಿಸಲಾಯಿತು’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯನ್ನು ಧಾರವಾಡದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಸ್.ಟಿ. ಸಿದ್ದಲಿಂಗಪ್ಪ ಅವರ ಮಾರ್ಗದರ್ಶನದಲ್ಲಿ ಗದಗ ಉಪಾಧೀಕ್ಷಕ ವಿಜಯ ಬಿರಾದಾರ ಅವರ ನೇತೃತ್ವದಲ್ಲಿ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.