ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಿಮ್ಸ್: ಆಸ್ಪತ್ರೆ ಆವರಣದಲ್ಲಿ ರೀಲ್ಸ್ ಮಾಡಿ 38 ವಿದ್ಯಾರ್ಥಿಗಳ ಅಮಾನತು

Published : 9 ಫೆಬ್ರುವರಿ 2024, 15:52 IST
Last Updated : 9 ಫೆಬ್ರುವರಿ 2024, 15:52 IST
ಫಾಲೋ ಮಾಡಿ
Comments

ಗದಗ: ನಗರದ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಜಿಮ್ಸ್‌) ಎಂಬಿಬಿಎಸ್‌ ಇಂಟರ್ನ್‌ಶಿಪ್‌ ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ಮಾಡಿದ ರೀಲ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಸಂಬಂಧ 38 ವಿದ್ಯಾರ್ಥಿಗಳನ್ನು ಒಂದು ವಾರ ಅಮಾನತು ಮಾಡಿ ಜಿಮ್ಸ್‌ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ಆದೇಶಿಸಿದ್ದಾರೆ.

ಎಂಬಿಬಿಎಸ್‌ ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಎದುರೇ ಕನ್ನಡ, ತಮಿಳು, ತೆಲುಗು, ಹಿಂದಿ ಚಿತ್ರ ಗೀತೆಗಳಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ರೀಲ್ಸ್‌ಗಳನ್ನು ನೋಡಿ ಕೆಲವರು ಇಷ್ಟಪಟ್ಟರೆ, ಇನ್ನು ಕೆಲವರು ‘ನಿಮ್ಮ ಹುಚ್ಚಾಟಕ್ಕೆ ಬೇರೆ ಜಾಗ ಸಿಗಲಿಲ್ವಾ?’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಎಂಬಿಬಿಎಸ್‌ ಇಂಟರ್ನ್‌ಶಿಪ್‌ ವಿದ್ಯಾರ್ಥಿಗಳು ಅನುಮತಿ ಪಡೆಯದೇ ಜಿಲ್ಲಾ ಆಸ್ಪತ್ರೆಯ ವಿವಿಧೆಡೆ ರೀಲ್ಸ್‌ ಮಾಡಿದ್ದಾರೆ. ಇದರ ಬಗ್ಗೆ ವಿಚಾರಿಸಿದಾಗ, ಏಪ್ರಿಲ್‌ನಲ್ಲಿ ಪದವಿ ಪೂರ್ಣಗೊಳ್ಳುವ ಸಂಭ್ರಮದಲ್ಲಿ ಯಾರಿಗೂ ತೊಂದರೆ ಆಗದಂತೆ ರೀಲ್ಸ್‌ ಮಾಡಿರುವುದಾಗಿ ತಿಳಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ರೀಲ್ಸ್‌ ಮಾಡಿದ್ದು ತಪ್ಪು’ ಗ್ರಾಜ್ಯುಯೇಷನ್‌ ಡೇ ಮಾಡದಿರಲು ನಿರ್ಧರಿಸಲಾಗಿದೆ’ ಎಂದು ಡಾ. ಬಸವರಾಜ ಬೊಮ್ಮನಹಳ್ಳಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT