ಈ ಕುರಿತು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಮುಖಂಡ ಶಂಕರ ಮರಾಠೆ ‘ಎರಡು ದಿನಗಳ ಹಿಂದೆಯಷ್ಟೇ ಮಾಚೇನಹಳ್ಳಿ ಗ್ರಾಮದ ಬಾಲಕಿಯನ್ನು ಡೆಂಗಿ ಜ್ವರ ಎಂದು ತಾಲ್ಲೂಕು ಆಸ್ಪತ್ರೆಯಿಂದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ನಿಷ್ಕಾಳಜಿಯಿಂದ ಬಾಲಕಿಯನ್ನು ಬಲಿ ತೆಗೆದುಕೊಂಡಿದೆ. ವೈದ್ಯರು ಇಂತಹ ಪ್ರಕರಣಗಳನ್ನು ಹಗುರವಾಗಿ ತೆಗೆದುಕೊಳ್ಳುವುದಲ್ಲದೆ ನಿಯಮಿತವಾಗಿ ಚಿಕಿತ್ಸೆ ಹಾಗೂ ಔಷಧಿ ನೀಡುತ್ತಿಲ್ಲ. ಈ ಕುರಿತು ಜಿಲ್ಲಾಡಳಿತವಾಗಲಿ, ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಕ್ರಮ ತೆಗೆದುಕೊಳ್ಳುತ್ತಿಲ್ಲ’ ಎಂದು ಆರೋಪಿಸಿದರು.