ಗದಗ: ‘ಚಾಲುಕ್ಯರು, ಹೊಯ್ಸಳರು, ವಿಜಯನಗರ, ಮೈಸೂರು ಸಂಸ್ಥಾನ ಸೇರಿ ಹಿಂದಿನ ಕಾಲದ ಸಾಂಸ್ಕೃತಿಕ ಸಂಪತ್ತು ಉಳಿಸಿಕೊಳ್ಳುವುದು ಅವಶ್ಯ. ಲಕ್ಕುಂಡಿಯ ಮಾದರಿಯಲ್ಲೇ ಅಗತ್ಯ ಇರುವ ಸ್ಥಳಗಳಲ್ಲಿ ಉತ್ಖನನ ಆರಂಭಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಉತ್ಖನನ ಕಾರ್ಯಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ದೇವಸ್ಥಾನಗಳನ್ನು ಮತ್ತು ಪುರಾತನ ಸ್ಮಾರಕಗಳನ್ನು ಸಂರಕ್ಷಿಸುವ ಕೆಲಸವನ್ನು ಸರ್ಕಾರ ಮಾಡಲಿದೆ’ ಎಂದರು.

‘ರಾಜ, ಮಹಾರಾಜರು ತಮ್ಮ ಅವಧಿಯಲ್ಲಿ ಅನೇಕ ದೇವಸ್ಥಾನ, ಕೋಟೆಗಳನ್ನು ಕಟ್ಟಿಸಿದರು. ಶಿಲಾಶಾಸನಗಳನ್ನು ರಚಿಸಿದರು. ಅವುಗಳಿಂದ ಅಂದಿನ ರಾಜ ವೈಭವ, ಆಡಳಿತ ತಿಳಿಯಬಹುದು. ಹೊಯ್ಸಳರು, ಚಾಲುಕ್ಯರು, ರಾಷ್ಟ್ರಕೂಟರ ಅನೇಕ ಕುರುಹುಗಳಿವೆ. ಅವಶೇಷಗಳ ಪುನರುಜ್ಜೀವನಕ್ಕೆ ಸಾಕಷ್ಟು ಹಣ ನೀಡಿದ್ದೇವೆ’ ಎಂದರು.

‘ಸಚಿವ ಎಚ್.ಕೆ.ಪಾಟೀಲ ಅವರಿಗೆ ಪರಂಪರೆ, ಸಂಸ್ಕೃತಿ ಬಗ್ಗೆ ಸಾಕಷ್ಟು ಆಸಕ್ತಿ ಇದೆ. 2017–18ರಲ್ಲಿ ಲಕ್ಕುಂಡಿ ಅಭಿವೃದ್ಧಿಗಾಗಿ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಯಿತು. ಈಗ ಉತ್ಖನನ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಜತೆಗೆ ಇಲ್ಲಿ ಸಿಕ್ಕಿರುವ ಪ್ರಾಚ್ಯಾವಶೇಷಗಳ ಸಂಗ್ರಹ ಮತ್ತು ಪ್ರದರ್ಶನಕ್ಕೆ ಅನುಕೂಲವಾಗುವಂತೆ ಬಯಲು ವಸ್ತು ಸಂಗ್ರಹಾಲಯ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ಕೊಡಲಾಗುವುದು’ ಎಂದರು.

‘1991ರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಆಗ ಲಕ್ಕುಂಡಿ ಗ್ರಾಮವು ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟಿತ್ತು. ಆಗ ರಾಜೀವ್ಗಾಂಧಿ ಅವರ ಹತ್ಯೆಯಾಗಿದ್ದರಿಂದ 10 ಸಾವಿರ ಮತಗಳಿಂದ ಸೋಲುಂಡೆ. ಲಕ್ಕುಂಡಿ ಜನರು ನನಗೆ ಮತ ಹಾಕಿದ್ದರು. ನಾನು ಮೈಸೂರಿನಿಂದ ಬಂದು ಸ್ಪರ್ಧಿಸಿದ್ದರೂ ನನಗೆ ಆಶೀರ್ವಾದಿಸಿದ್ದರು. ಅದಕ್ಕಾಗಿ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದರು.

ಶಿಕ್ಷಣ ಆರೋಗ್ಯಕ್ಕೆ ಮೊದಲ ಆದ್ಯತೆ: ಸಿಎಂ

‘ಬಸವಣ್ಣ ಅಂಬೇಡ್ಕರ್ ಮಹಾತ್ಮ ಗಾಂಧೀಜಿಯವರ ಆಶಯಗಳು ಈಡೇರಬೇಕಾದರೆ ಸರ್ವರಿಗೂ ಶಿಕ್ಷಣ ಸಿಗಬೇಕು. ಅದಕ್ಕೆ ನಮ್ಮ ಸರ್ಕಾರವು ಶಿಕ್ಷಣ ಆರೋಗ್ಯ ಮತ್ತು ಅನ್ನಕ್ಕೆ ಮೊದಲ ಆದ್ಯತೆ ನೀಡಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ವಿವೇಕಾನಂದ ಸಭಾಭವನದಲ್ಲಿ ಮಂಗಳವಾರ ಕುರುಬರ ಸಹಕಾರ ಪತ್ತಿನ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಸಂವಿಧಾನ ಜಾರಿಯಾಗಿ 75 ವರ್ಷಗಳಾದರೂ ಸಂಪೂರ್ಣ ಶಿಕ್ಷಣ ಇನ್ನೂ ಸಾಧ್ಯವಾಗಿಲ್ಲ. ಅಂಬೇಡ್ಕರ್ ಅವರು ಕೊಟ್ಟಿರುವ ಶಿಕ್ಷಣ ಸಂಘಟನೆ ಹೋರಾಟ ಎಂಬ ಮಂತ್ರವನ್ನು ಎಲ್ಲರೂ ಪಾಲಿಸಬೇಕು’ ಎಂದರು. ‘ಶೂದ್ರ ವರ್ಗದ ಜನರು ಸಾಮಾಜಿಕ ಆರ್ಥಿಕವಾಗಿ ಹಿಂದುಳಿಯಲು ಶಿಕ್ಷಣದಿಂದ ವಂಚಿತರಾಗಿದ್ದೇ ಕಾರಣ. ಈ ಹಿಂದೆ ದಲಿತರು ಶೂದ್ರರು ಶಿಕ್ಷಣ ಪಡೆಯುವಂತಿರಲಿಲ್ಲ. ಇಂತಹ ಅಸಮಾನತೆ ಅಳಿಸಿ ಹಾಕುವುದೇ ಅಂಬೇಡ್ಕರ್ ಅವರ ಹೋರಾಟವಾಗಿತ್ತು. ಇದಕ್ಕೆ ಶಿಕ್ಷಣವೇ ಪ್ರಮುಖ ಅಸ್ತ್ರವೆಂದು ಅರಿತಿದ್ದರು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.