ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗೈಕ್ಯ ತೋಂಟದ ಶ್ರೀಗಳ ಸಲಹೆಗೆ ಸರ್ಕಾರ ಸ್ಪಂದನೆ; ಸ್ವಾಗತ

Last Updated 3 ಜನವರಿ 2020, 14:20 IST
ಅಕ್ಷರ ಗಾತ್ರ

ಗದಗ: ಡಾ. ರಾಧಾಕೃಷ್ಣನ್‌ ಅವರ ಜನ್ಮದಿನದ ಬದಲು ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಬೇಕೆಂದು 2018ರ ಸೆ.5ರಂದು ಗದುಗಿನಲ್ಲಿ ನಡೆದಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಲಿಂಗೈಕ್ಯ ಡಾ. ತೋಂಟದ ಸಿದ್ಧಲಿಂಗ ಶ್ರೀಗಳು ಸರ್ಕಾರವನ್ನು ಆಗ್ರಹಿಸಿದ್ದರು.

‘ಅಂದು ಶ್ರೀಗಳ ಹೇಳಿಕೆಯನ್ನು ಕೆಲವರು ವಿರೋಧಿಸಿದ್ದರು. ಆದರೆ, ಅವರ ಹೇಳಿಕೆಯಲ್ಲಿ ಸತ್ಯವಿದೆ ಎಂದು ಈಗ ಸಾಬೀತಾಗಿದೆ. ಜ.3ರಂದು ಶಾಲಾ, ಕಾಲೇಜುಗಳಲ್ಲಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚರಣೆ ಆಚರಿಸುವಂತೆ ಸರ್ಕಾರ ಆದೇಶ ಹೊರಡಿಸಿರುವುದು ಸ್ವಾಗತಾರ್ಹ’ ಎಂದು ಲಿಂಗಾಯತ ಪ್ರಗತಿಶೀಲ ಸಂಘ, ಬಸವದಳ, ಬಸವಕೇಂದ್ರ, ಜಿಲ್ಲೆಯ ದಲಿತಪರ ಸಂರ್ಘಟನೆಗಳು ಹೇಳಿವೆ.

ಅಂದಿನ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿದ್ಧಲಿಂಗ ಸ್ವಾಮೀಜಿ, ‘ರಾಷ್ಟ್ರಪತಿಯಾಗಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುವ ಬದಲು ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾ ಫುಲೆ ಹೆಸರಿನಲ್ಲಿ ಶಿಕ್ಷಕರ ದಿನಾಚರಣೆ ನಡೆಯಬೇಕು’ ಎಂದು ಅಭಿಪ್ರಾಯಪಟ್ಟಿದ್ದರು. ಈ ಕುರಿತು ಪ್ರಜಾವಾಣಿಯಲ್ಲಿ ವರದಿ ಪ್ರಕಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT