ವೀರನಾರಾಯಣ ದೇವಸ್ಥಾನ, ವೀರೇಶ್ವರ ಪುಣ್ಯಾಶ್ರಮಕ್ಕೆ ರಾಜ್ಯಪಾಲರ ಭೇಟಿ

ಗದಗ: ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಬುಧವಾರ ಗದುಗಿನ ವೀರನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ, ಅರ್ಚಕರಿಂದ ದೇವಸ್ಥಾನದ ಇತಿಹಾಸ ಕುರಿತು ಮಾಹಿತಿ ಪಡೆದರು.
ತದನಂತರ ವೀರೇಶ್ವರ ಪುಣ್ಯಾಶ್ರಮದ ಪುಟ್ಟರಾಜ ಗವಾಯಿಗಳ ಮಠಕ್ಕೆ ಭೇಟಿ ನೀಡಿದ ಅವರು, ತ್ರಿಮೂರ್ತಿ ಗುರುಗಳ ಗದ್ದುಗೆಯ ದರ್ಶನ ಪಡೆದರು. ಬಳಿಕ ಆಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರ ಆಶೀರ್ವಾದ ಪಡೆದು, ಕುಶಲೋಪರಿ ವಿಚಾರಿಸಿದರು.
ಇದೇವೇಳೆ, ಮಠದ ಅಂಧ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಂಗೀತ ಕಾರ್ಯಕ್ರಮಕ್ಕೆ ತಲೆದೂಗಿದ ರಾಜ್ಯಪಾಲರು, ವಿದ್ಯಾರ್ಥಿಗಳ ಸಂಗೀತ ವಿದ್ವತ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಎಂ.ಸುಂದರೇಶ್‌ಬಾಬು, ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು, ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ತಹಶೀಲ್ದಾರ್ ಕಿಶನ್ ಕಲಾಲ, ವೀರನಾರಾಯಣ ದೇವಸ್ಥಾನದ ಅರ್ಚಕರು ಹಾಗೂ ವೀರೇಶ್ವರ ಪುಣ್ಯಾಶ್ರಮದ ವಿದ್ಯಾರ್ಥಿಗಳು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.