ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ | ರೈತರನ್ನು ಬೀದಿಗೆ ತಳ್ಳಿದ ಸರ್ಕಾರ: ಆಕ್ರೋಶ

Last Updated 26 ನವೆಂಬರ್ 2020, 16:51 IST
ಅಕ್ಷರ ಗಾತ್ರ

ಗದಗ: ‘ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ತರುವ ಮೂಲಕ ಕೃಷಿಕರನ್ನು ಬೀದಿಗೆ ತಂದು ನಿಲ್ಲಿಸಿದೆ’ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರುತಿ ಚಿಟಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘಗಳು, ವಿವಿಧ ಕಾರ್ಮಿಕ ಸಂಘಟನೆಗಳು ದೇಶಾದ್ಯಂತ ಜಂಟಿಯಾಗಿ ಕರೆ ನೀಡಿದ್ದ ಮುಷ್ಕರದ ಭಾಗವಾಗಿ ನಗರದ ಗಾಂಧಿ ವೃತ್ತದಲ್ಲಿ ಗುರುವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

‘ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸದ ಬಿಜೆಪಿ ಸರ್ಕಾರ ರೈತರು, ಕಾರ್ಮಿಕರ ಬದುಕಿನ ಮೇಲೆ ಕೊಡಲಿ ಪೆಟ್ಟು ಬೀಸಿದೆ’ ಎಂದರು.

ವಿಮಾ ನೌಕರರ ಸಂಘದ ಜಿಲ್ಲಾ ಮುಖಂಡ ಜೆ.ಎಸ್.ತಳವಾರ ಮಾತನಾಡಿ, ‘ಬ್ಯಾಂಕ್‌, ರೈಲ್ವೆ, ವಿಮಾ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವುದನ್ನು ಬಿಟ್ಟು ಖಾಸಗೀಕರಣಕ್ಕೆ ಮುಂದಾಗಿರುವುದು ನಾಚೀಕೆಗೇಡಿನ ಸಂಗತಿ’ ಎಂದು ಬೇಸರ ವ್ಯಕ್ತಪಡಿಸಿದರು.

ಗದುಗಿನ ಮುನ್ಸಿಪಲ್ ಕಾಲೇಜು ಮೈದಾನದಿಂದ ರ‍್ಯಾಲಿ ಪ್ರಾರಂಭವಾಗಿ ಮಹಾತ್ಮ ಗಾಂಧಿ ವೃತ್ತದಲ್ಲಿ ಕೊನೆಗೊಂಡಿತು. ನಂತರ ಅಲ್ಲೇ ಮಾನವ ಸರಪಳಿ ರಚಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್‌ ಕುಮಾರ್‌ ಅವರ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಆಶಾ ಕಾರ್ಯಕರ್ತೆಯರ ಸಂಘಟನೆಯ ಜಿಲ್ಲಾ ಮುಖಂಡ ಸುರೇಶ, ಎಂ.ಬಿ ಬನ್ನೂರ, ಗೋಪಾಲರಾಯ, ವಿಮಾ ಪ್ರತಿನಿಧಿಗಳ ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಎಫ್. ಎಸ್. ಶಿಂದಗಿ, ಸಿಐಟಿಯು ಜಿಲ್ಲಾ ಘಟಕದ ಉಪಾಧ್ಯಕ್ಷೆ ಯಶೋದಾ ಬೆಟಗೇರಿ, ಆರ್.ಎನ್.ಸಂಕನಗೌಡ್ರ ಸಿದ್ದಲಿಂಗಪ್ಪ ಶಾಗೋಟಿ ನಾಗರತ್ನ ಬಡಗಣ್ಣವರ, ಆಶಾ ನೌಕರರ ಸಂಘಟನೆಯ ಜಿಲ್ಲಾ ಮುಖಂಡ ಸುರೇಶ, ಯಮುನಾ ಗೋಟುರ ಶಾಂತಣ್ಣ ಮುಳವಾಡ ದೇವಪ್ಪ ಕಲ್ಮನಿ ಸಾವಿತ್ರಿ, ವಿಜಯಾ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT