ಗಜೇಂದ್ರಗಡ: ಸಮೀಪದ ರಾಜೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿಂಗವ್ವ ಎಸ್. ಶಂಕ್ರಿ ಕಾಂಗ್ರೆಸ್ ತೊರೆದು ಬುಧವಾರ ಮಾಜಿ ಸಚಿವ ಕಳಕಪ್ಪ ಬಂಡಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಈ ವೇಳೆ ಮಾಜಿ ಸಚಿವ ಕಳಕಪ್ಪ ಬಂಡಿ ಮಾತನಾಡಿ, ‘ಎಲ್ಲ ಸದಸ್ಯರು ಸಹಕಾರದಿಂದ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿʼ ಎಂದರು.
ಗ್ರಾಮ ಪಂಚಾಯಿತಿಯ ಮೊದಲ ಅವಧಿಯಲ್ಲಿ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ನಿಂಗವ್ವ ಶಂಕ್ರಿ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಕಳೆದ ವರ್ಷ ಜು. 24ರಂದು ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದರು.