ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2,999 ಗ್ರಾಮಗಳಿಗೆ ಟ್ಯಾಂಕರ್ ನೀರು

ಜಿಲ್ಲೆಯ ಬರ ನಿರ್ವಹಣೆ ಪರಿಶೀಲನೆ ಸಭೆಯಲ್ಲಿ ತಿಳಿಸಿದ ಕಂದಾಯ ಸಚಿವ ಆರ್.ವಿ. ದೇಶಪಾಂಡೆ
Last Updated 20 ಮೇ 2019, 20:19 IST
ಅಕ್ಷರ ಗಾತ್ರ

ಗದಗ: ‘ರಾಜ್ಯದಲ್ಲಿ ಬರಗಾಲ ತೀವ್ರ ಸ್ವರೂಪ ಪಡೆದಿರುವುದರಿಂದ ಒಟ್ಟು 2,999 ಗ್ರಾಮಗಳಿಗೆ ಟ್ಯಾಂಕರ್ ನೀರು ಪೂರೈಸಲಾಗುತ್ತಿದೆ’ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.

ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಭಾನುವಾರ ನಡೆದ ಜಿಲ್ಲೆಯ ಬರ ನಿರ್ವಹಣೆಯ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಈಗಾಗಲೇ ಸುಮಾರು ₹ 730 ಕೋಟಿ 30 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜಂಟಿ ಖಾತೆಯಲ್ಲಿದೆ. ಜಾನುವಾರುಗಳಿಗೆ ಕುಡಿಯುವ ನೀರಿನ, ಮೇವಿನ ಅಭಾವ ಆಗದಂತೆ ಜನರಿಗೆ ಉದ್ಯೋಗ ದೊರೆಯುವಂತೆ ಹಾಗೂ ಯಾರು ಗುಳೆ ಹೋಗದಂತೆಅಧಿಕಾರಿಗಳು ಕಟ್ಟುನಿಟ್ಟಿನ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಕಳೆದ ಬಾರಿ ರಾಜ್ಯದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ 10.47 ಕೋಟಿ ಮಾನವ ದಿನಗಳನ್ನು ಸೃಷ್ಟಿಸಲಾಗಿತ್ತು. ಈ ಬಾರಿ 13 ಕೋಟಿ ಮಾನವ ದಿನಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ. ಪ್ರಸಕ್ತ ಸಾಲಿನಲ್ಲಿ 150 ದಿನಗಳ ಉದ್ಯೋಗ ನೀಡಲಾಗುತ್ತಿದೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಕಳೆದ 14 ವರ್ಷಗಳಿಂದ ಸತತ ಬರಗಾಲವಿದ್ದು, ಬರ ಎದುರಿಸಲು ಶಾಶ್ವತ ಪರಿಹಾರ ಕ್ರಮಗಳನ್ನು ಕಂಡುಕೊಳ್ಳಬೇಕಿದೆ. ಈ ಕುರಿತು ಜಿಲ್ಲಾಡಳಿತಗಳು ಸ್ಥಳೀಯ ಹಾಗೂ ಅಗತ್ಯ ಸಂಪನ್ಮೂಲಗಳನ್ನು ಆಧಾರವಾಗಿಟ್ಟುಕೊಂಡು ಪ್ರಸ್ತಾವ ತಯಾರಿಸಲು ಸೂಚನೆ ನೀಡಲಾಗಿದೆ’ ಎಂದರು.

‘ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯಲ್ಲಿ ಶೇ 41ರಷ್ಟು ಕೊರತೆ ಎದುರಿಸಿದ್ದು, ಮುಂಗಾರು ಮಳೆಯವರೆಗೆ ಜಿಲ್ಲಾಡಳಿತಗಳು ತಮ್ಮ ಜಿಲ್ಲೆಯ ಜನರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ಅವರು ತಿಳಿಸಿದರು.

ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪಂಚಾಯ್ತಿ ಸಿಇಒ ಮಂಜುನಾಥ ಚವ್ಹಾಣ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT