ಗದಗ: ‘2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರೈತರಿಂದ ಎಫ್ಎಕ್ಯು ಗುಣಮಟ್ಟದ ಹೆಸರುಕಾಳು ಹುಟ್ಟುವಳಿ ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಜಿಲ್ಲೆಯ ರೈತರಿಂದ ಪ್ರತಿ ಎಕರೆಗೆ 3 ಕ್ವಿಂಟಲ್ನಂತೆ ಗರಿಷ್ಠ 15 ಕ್ವಿಂಟಲ್ ಎಫ್ಎಕ್ಯು ಗುಣಮಟ್ಟದ ಹೆಸರು ಖರೀದಿಸಬೇಕು. ಸರ್ಕಾರದ ಮಾನದಂಡಗಳನ್ವಯ ಎಫ್ಎಕ್ಯು ಗುಣಮಟ್ಟ ದೃಢೀಕರಿಸಲು ಕ್ರಮ ವಹಿಸಬೇಕು. ಹೆಸರು ಕಾಳಿನ ಎಫ್ಎಕ್ಯು ಪ್ರಕ್ರಿಯೆಯಲ್ಲಿ ಗುಣಮಟ್ಟ ಪರಿಶೀಲನೆಗಾಗಿ ಲಭ್ಯವಿರುವ ಅಧಿಕಾರಿಗಳು, ಸಿಬ್ಬಂದಿಯನ್ನು ಬಳಸಿಕೊಳ್ಳಬೇಕು. ಅವರಿಗೆ ತರಬೇತಿ ಅವಶ್ಯವಿದ್ದಲ್ಲಿ ಎಫ್ಎಕ್ಯು ಗ್ರೇಡಿಂಗ್ ತರಬೇತಿ ನೀಡಲು ಖರೀದಿ ಸಂಸ್ಥೆಗಳು ಕ್ರಮ ವಹಿಸಬೇಕು’ ಎಂದು ಸೂಚಿಸಿದರು.

‘ಜಿಲ್ಲೆಯಲ್ಲಿ ಗದಗ ಹಾಗೂ ನರಗುಂದದಲ್ಲಿ ಮಾರ್ಕ್ಫೆಡ್ ಸಂಸ್ಥೆಯ ಶಾಖೆಗಳಿದ್ದು, ಜಿಲ್ಲೆಯ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ಎನ್ಸಿಸಿಎಫ್ ಮಾರ್ಗಸೂಚಿ ಅನ್ವಯ ಹಾಗೂ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಪಿಎಜಿಎಸ್, ಒಜಿಸಿಎಸ್, ಟಿಎಪಿಸಿಎಂಎಸ್, ಎಫ್ಪಿಒಗಳ ಜತೆಗೆ ಒಡಂಬಡಿಕೆ ಮಾಡಿಕೊಂಡು ಖರೀದಿ ಕೇಂದ್ರಗಳನ್ನು ತೆರೆಯಬೇಕು’ ಎಂದು ಸೂಚಿಸಿದರು.

‘ಎಫ್ಎಕ್ಯು ಗುಣಮಟ್ಟದ ಹೆಸರು ಉತ್ಪನ್ನವನ್ನು ಪ್ರತಿ ಕ್ವಿಂಟಲ್ಗೆ ₹8,768ರಂತೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಆದೇಶ ಹೊರಡಿಸಿದ ದಿನಾಂಕದಿಂದ ರೈತರ ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರಗೆ ನಿಗದಿಪಡಿಸಲಾಗಿದೆ. ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಸಹ ಪ್ರಾರಂಭಿಸಿ ರಾಜ್ಯದಲ್ಲಿ ಮಾರ್ಕ್ಫೆಡ್ ಸಂಸ್ಥೆಯ ಮೂಲಕ ಖರೀದಿಸಲು ಆದೇಶಿಸಲಾಗಿದೆ’ ಎಂದು ಕೃಷಿ ಮಾರಾಟ ಇಲಾಖೆಯ ಅಧಿಕಾರಿಗಳು ತಿಳಿಸಿದರು.

ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.