ಗದಗ: ‘ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ನಡೆಸಿದೆ. ಇದು ರಾಜ್ಯದ ಮಹಿಳೆಯರಿಗೆ ಮಾಡಿದ ಮಹಾಮೋಸ’ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಆರ್. ಗೋವಿಂದಗೌಡ್ರ ಟೀಕಿಸಿದ್ದಾರೆ.

‘ಆರ್ಥಿಕ ವರ್ಷ ಮುಗಿದಿದ್ದರಿಂದ ಈಗ ಹಳೆಯ ಎರಡು ತಿಂಗಳ ಬಾಕಿ ಭರ್ತಿ ಮಾಡುವುದು ಕಷ್ಟಸಾಧ್ಯ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಎಲ್ಲರನ್ನೂ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಎರಡು ತಿಂಗಳ ಗೃಹಲಕ್ಷ್ಮಿ ಹಣ ಮಹಿಳೆಯರಿಗೆ ಸೇರದೆ, ಯಾರಿಗೆ ಸೇರಿತು? ಎಲ್ಲಿ ಹೋಯಿತು? ಎಂಬುದನ್ನು ತಿಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಈ ಹಣ ಆರ್ಥಿಕ ಇಲಾಖೆಯಿಂದ ಬಿಡುಗಡೆಯಾಗಿದ್ದು ಮಹಿಳೆಯರಿಗೆ ತಲುಪದಿರುವುದು ದೊಡ್ಡ ಹಗರಣದ ಮುನ್ಸೂಚನೆ ನೀಡುತ್ತಿದೆ. ಗ್ಯಾರಂಟಿ ಗ್ಯಾರಂಟಿ ಎಂದು ನಂಬಿಸಿ, ಓಟು ಪಡೆದು ರಾಜ್ಯದ ಜನರಿಗೆ ವಂಚನೆ ಮಾಡುತ್ತಿದ್ದಾರೆ. ರಾಜ್ಯದ ಹಣವನ್ನು ಲೂಟಿ ಮಾಡಲು ಕಾಂಗ್ರೆಸ್ ಪಕ್ಷ ಈ ಗ್ಯಾರಂಟಿಗಳನ್ನು ತಂದಿದೆ’ ಎಂದು ಆರೋಪ ಮಾಡಿದ್ದಾರೆ.

‘ಬರುವ ತಿಂಗಳ ಒಳಗಾಗಿ ಕಳೆದ ಆರ್ಥಿಕ ವರ್ಷದ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರಿಗೆ ಜಮೆಯಾಗದಿದ್ದರೆ ಇದನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಲಾಗುವುದು’ ಎಂದು ಅವರು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.