ಗದಗ: ‘ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಹಾಗೂ ಸ್ವಾವಲಂಬಿಯಾಗಿ ಜೀವನ ನಡೆಸಲು ಪಂಚ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದ್ದು, ಯೋಜನೆಯ ಸೌಲಭ್ಯ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಲಭಿಸಬೇಕು’ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನವಾದ ನಂತರ ದೇಶದಲ್ಲೇ ಕರ್ನಾಟಕ ರಾಜ್ಯ ತೆರಿಗೆ ಪಾವತಿಸುವುದರಲ್ಲಿ ಎರಡನೇ ಸ್ಥಾನದಲ್ಲಿದೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಗೃಹಲಕ್ಷ್ಮಿ ಯೋಜನೆಯ ಉದ್ದೇಶವಾಗಿದ್ದು, 1.23 ಕೋಟಿ ಮಹಿಳೆಯರು ಇದರ ಲಾಭ ಪಡೆಯುತ್ತಿದ್ದಾರೆ ಎಂದರು.

ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪೋತಿಯಾದವರ ಮನೆ ಯಜಮಾನಿ ಹೆಸರಿನಲ್ಲಿಯೂ ಯೋಜನೆಯ ಹಣ ಖಾತೆಗೆ ಜಮಾ ಆಗಿದ್ದು, ಮರಣ ಹೊಂದಿದವರ ಖಾತೆಗೆ ಜಮಾ ಆದ ಹಣವನ್ನು ವಸೂಲು ಮಾಡಿ ಸರ್ಕಾರಕ್ಕೆ ಮರುಪಾವತಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಯೋಜನೆಯ ಸೌಲಭ್ಯದ ದುರುಪಯೋಗವಾಗದಂತೆ ಕ್ರಮ ವಹಿಸಲಾಗುತ್ತಿದೆ ಎಂದರು.

ಪ್ರಯಾಣಿಕರ ಆರೋಗ್ಯದ ದೃಷ್ಟಿಯಿಂದ ಜಿಲ್ಲೆಯ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಬೇಕು. ಮಹಿಳೆಯರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ, ವಿಶ್ರಾಂತಿಗೃಹ ಹಾಗೂ ಶೌಚಾಲಯಗಳಿರುವಂತೆ ಕ್ರಮ ವಹಿಸಬೇಕು. ಪಡಿತರ ಅಂಗಡಿಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಕ ಪ್ರದರ್ಶಿಸಬೇಕು. ಒಟ್ಟಾರೆಯಾಗಿ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಫಲಾನುಭವಿಗಳಿಗೆ ದೊರಕಿಸುವಲ್ಲಿ ನಿಷ್ಠೆಯಿಂದ ಕೆಲಸ ನಿರ್ವಹಿಸಬೇಕು ಎಂದರು.

ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು.

ತಾಲ್ಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ, ವೀರಯ್ಯ ಮಠಪತಿ, ಡಿ.ಡಿ.ಮರ್ನಾಳ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್.ಮುಂಡರಗಿ, ಯೋಜನಾ ನಿರ್ದೇಶಕ ಎಂ.ವಿ.ಚಳಗೇರಿ, ಜಿಲ್ಲಾ ಹಾಗೂ ತಾಲ್ಲೂಕು ಸಮಿತಿ ಸದಸ್ಯರು ಇದ್ದರು.

ಗ್ಯಾರಂಟಿ ಯೋಜನೆಗಳ ಸೌಲಭ್ಯ ಒದಗಿಸುವುದು ಬಡಜನರ ಸೇವೆಗೆ ಸರ್ಕಾರವು ಒದಗಿಸಿಕೊಟ್ಟ ಅವಕಾಶವಾಗಿದೆ. ಸೌಲಭ್ಯಗಳ ದುರುಪಯೋಗವಾಗದಂತೆ ನಿಗಾ ವಹಿಸಬೇಕು.
–ಬಿ.ಬಿ.ಅಸೂಟಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ

ಜಿಲ್ಲಾ ಮಟ್ಟದ ಸಮಾವೇಶ

ಫೆಬ್ರುವರಿ 18ರಂದು ಪಂಚ ಗ್ಯಾರಂಟಿ ಯೋಜನೆಗಳ ಗದಗ ಜಿಲ್ಲಾ ಮಟ್ಟದ ಸಮಾವೇಶ ಹಾಗೂ ಫಲಾನುಭವಿಗಳೊಂದಿಗೆ ಚರ್ಚೆ ಸಮಾರಂಭ ಆಯೋಜಿಸಲಾಗಿದೆ ಎಂದು ಎಸ್.ಆರ್.ಪಾಟೀಲ ತಿಳಿಸಿದರು. ಈ ಸಮಾವೇಶವನ್ನು ವಿಜೃಂಭಣೆಯಿಂದ ಉತ್ಸವದಂತೆ ಆಚರಿಸಲು ಉದ್ದೇಶಿಸಲಾಗಿದೆ.

ಗ್ಯಾರಂಟಿ ಸಮಾವೇಶವು ವ್ಯವಸ್ಥಿತವಾಗಿ ನಡೆಸಲು ವಿವಿಧ ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಮಾಡಬೇಕು. ಸಮಾವೇಶದಲ್ಲಿ ಐದೂ ಗ್ಯಾರಂಟಿ ಯೋಜನೆಗಳ ಪ್ರತ್ಯೇಕ ಮಳಿಗೆಗಳನ್ನು ಹಾಕಬೇಕು. ಶಿಷ್ಟಾಚಾರದ ಅನ್ವಯ ಆಮಂತ್ರಣ ಪತ್ರಿಕೆ ವೇದಿಕೆ ವ್ಯವಸ್ಥೆ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.