ಶುಕ್ರವಾರ, ಮೇ 27, 2022
21 °C

ಸಿ.ಎಂಗೆ ಶಾಸಕ ಎಚ್‌.ಕೆ. ಪಾಟೀಲ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ವಿಶ್ವದಲ್ಲೆಡೆ ಆತಂಕ ಸೃಷ್ಟಿಸಿರುವ ಓಮೈಕ್ರಾನ್‌ ವೈರಸ್‌ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿ ಗದಗ ಶಾಸಕ ಎಚ್‌.ಕೆ.ಪಾಟೀಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಮೂರನೇ ಅಲೆ ನಿಯಂತ್ರಣಕ್ಕಾಗಿ ತಕ್ಷಣವೇ ವಾರಾಂತ್ಯ ಕರ್ಫ್ಯೂ, ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡುವ ಸೌಲಭ್ಯ ಜಾರಿಗೊಳಿಸುವಂತೆಯೂ ಅವರು ಆಗ್ರಹಿಸಿದ್ದಾರೆ.  

ಓಮೈಕ್ರಾನ್ ವೈರಸ್ ಗಂಭೀರವೋ, ಮಾರಣಾಂತಿಕವೋ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಆದರೆ, ಈ ಮೊದಲಿನ ವೈರಸ್‌ಗಳಿಗಿಂತ ಇದು ಹೆಚ್ಚು ಅಪಾಯಕಾರಿ ಎಂದು ತಜ್ಞರು ಎಚ್ಚರಿಸಿದ್ದಾರೆ. ಆದರೂ, ಈ ವಿಚಾರದಲ್ಲಿ ಸರ್ಕಾರ ತ್ವರಿತ ನಿರ್ಧಾರ ತೆಗೆದುಕೊಳ್ಳದೇ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ದೂರಿದ್ದಾರೆ.

ಓಮೈಕ್ರಾನ್‌ ನಿರ್ವಹಣೆ ವಿಚಾರದಲ್ಲಿ ಸರ್ಕಾರ ಭಯದಿಂದಲೇ ಕೆಲಸ ಮಾಡಬೇಕು. ಅಧಿಕಾರಿ ವರ್ಗವನ್ನು ಯುದ್ಧೋಪಾದಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.