ಗುರುವಾರ , ಮೇ 26, 2022
23 °C

‘ಬಿಜೆಪಿ– ಜೆಡಿಎಸ್‌ನದ್ದು ಅಪವಿತ್ರ ಮೈತ್ರಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ‘ಬಿಜೆಪಿ, ಜೆಡಿಎಸ್‌ನದ್ದು ಅಪವಿತ್ರ ಮೈತ್ರಿ. ಈ ಎರಡೂ ಪಕ್ಷಗಳಿಗೆ ಸಾರ್ವಜನಿಕರ ಎದುರಿಗೆ ತಮ್ಮ ಪ್ರಾಮಾಣಿಕ ಅಭಿಪ್ರಾಯವನ್ನು ತಿಳಿಸುವ ಶಕ್ತಿ ಇಲ್ಲ’ ಎಂದು ಶಾಸಕ ಎಚ್‌.ಕೆ.ಪಾಟೀಲ ಲೇವಡಿ ಮಾಡಿದರು.

ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಧಾರವಾಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಹಾವೇರಿ, ಧಾರವಾಡ ಮತ್ತು ಗದಗ ಜಿಲ್ಲೆಗಳಿಂದ ಒಟ್ಟು 7,500 ಮತದಾರರು ಇದ್ದಾರೆ. ಈ ಪೈಕಿ ಗದಗ ಜಿಲ್ಲೆಯಲ್ಲಿ 1,965 ಮಂದಿ ಮತದಾರರು ಇದ್ದು, ಎಲ್ಲರೂ ಕಾಂಗ್ರೆಸ್‌ ಬೆಂಬಲಿಸಲಿದ್ದಾರೆ’ ಎಂದರು.

‘73 ಮತ್ತು 74ನೇ ತಿದ್ದುಪಡಿ ಮೂಲಕ ಸ್ಥಳೀಯ ಸಂಸ್ಥೆಗಳನ್ನು ಬಲಿಷ್ಠಗೊಳಿಸುವ ಕೆಲಸ ಮಾಡಲಾಗಿದೆ. ಈ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಷ್ಟು ಮತಗಳು ಬೇಕೋ ಅದಕ್ಕಿಂತಲೂ ಹೆಚ್ಚು ಮತಗಳು ಸಿಗಲಿವೆ. ಕಾಂಗ್ರೆಸ್‌ ಅಭ್ಯರ್ಥಿ ಸಲೀಂ ಅಹ್ಮದ್‌ ಅವರು 1,200ಕ್ಕೂ ಅಧಿಕ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆಯುವ ವಿಶ್ವಾಸ ಇದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.