ಮುಂಡರಗಿ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಹಾಗೂ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಹೆಚ್ಚುವರಿ ನೀರು ಬಿಟ್ಟಿರುವ ಕಾರಣ ತಾಲ್ಲೂಕಿನ ತುಂಗಭದ್ರಾ ನದಿಯ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ.

ಬ್ಯಾರೇಜಿನಲ್ಲಿ ಸದ್ಯ ಸಾಕಷ್ಟು ಪ್ರಮಾಣದ ನೀರು ಸಂಗ್ರಹವಿದ್ದು, ಮಂಗಳವಾರ 3,500 ಕ್ಯೂಸೆಕ್ ನೀರು ಹಮ್ಮಿಗಿ ಬ್ಯಾರೇಜಿಗೆ ಹರಿದು ಬಂದಿದೆ. ಬ್ಯಾರೇಜಿನ ಒಂದು ಗೇಟ್ ತೆರೆದು ಅದರ ಮೂಲಕ 850 ಕ್ಯೂಸೆಕ್ ನೀರನ್ನು ಬ್ಯಾರೇಜಿನಿಂದ ತುಂಗಭದ್ರಾ ನದಿ ಪಾತ್ರಕ್ಕೆ ಹರಿಸಲಾಗುತ್ತಿದೆ.

ಮಾರ್ಚ್ 26ರಿಂದ ನದಿ ಪಾತ್ರದ ಒಳ ಹರಿವು ಹೆಚ್ಚಾಗುವ ಸಾಧ್ಯತೆ ಇದ್ದು, ಗುರುವಾರದಿಂದ ನಿತ್ಯ 1,500 ಕ್ಯೂಸೆಕ್ ನೀರನ್ನು ನದಿ ಪಾತ್ರಕ್ಕೆ ಹರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಲ್ಲೂಕಿನ ತುಂಗಭದ್ರಾ ನದಿ ದಂಡೆಯ ಹೆಸರೂರು, ಕೊರ್ಲಹಳ್ಳಿ, ಗಂಗಾಪೂರ, ಶೀರನಹಳ್ಳಿ, ಶಿಂಗಟಾಲೂರ, ಹಮ್ಮಿಗಿ, ಬಿದರಳ್ಳಿ ಮೊದಲಾದ ಗ್ರಾಮಗಳ ರೈತರು ಬೇಸಿಗೆ ಹಂಗಾಮಿನಲ್ಲಿ ಅಪಾರ ಪ್ರಮಾಣದ ಭತ್ತ ನಾಟಿ ಮಾಡಿದ್ದಾರೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ ನದಿ ನೀರು ಬತ್ತಿ ಹೋಗುತ್ತದೆ. ಈಗ ಹೆಚ್ಚುವರಿ ನೀರು ನದಿಯಲ್ಲಿ ಹರಿಯುತ್ತಿರುವುದರಿಂದ ಹಾಗೂ ಶಿವಮೊಗ್ಗ ಹಾಗೂ ಮಲೆನಾಡಿನಲ್ಲಿ ಈಗಾಗಲೇ ಮಳೆ ಬೀಳುತ್ತಿರುವುದರಿಂದ ಬೇಸಿಗೆಯಲ್ಲಿ ನದಿ ನೀರು ಕಡಿಮೆಯಾಗಬಹುದು ಎನ್ನುವ ಆತಂಕ ರೈತರಿಂದ ದೂರವಾಗಿದೆ.

ನದಿ ಪಾತ್ರದಲ್ಲಿ ನೀರಿನ ಹರಿವು ಹೆಚ್ಚಾಗುತ್ತಲಿದ್ದು, ನದಿ ದಂಡೆಯ ಮೇಲಿರುವ ಗ್ರಾಮಗಳ ಜನರು ಹಾಗೂ ನದಿಯಿಂದ ನೀರಾವರಿ ಸೌಲಭ್ಯ ಪಡೆದುಕೊಂಡಿರುವ ರೈತರು ನದಿಯಲ್ಲಿ ಇಳಿಯಬಾರದು ಎಂದು ಏತ ನೀರಾವರಿ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-23-621405089

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.