ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಟ್ಸ್‌ಆ್ಯಪ್‌ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ: ಕಾನ್‌ಸ್ಟೆಬಲ್‌ ಅಮಾನತು

Published 4 ಫೆಬ್ರುವರಿ 2024, 15:40 IST
Last Updated 4 ಫೆಬ್ರುವರಿ 2024, 15:40 IST
ಅಕ್ಷರ ಗಾತ್ರ

ನರೇಗಲ್ (ಗದಗ ಜಿಲ್ಲೆ): ನರ್ಸಿಂಗ್‌ ವಿದ್ಯಾರ್ಥಿನಿಯೊಬ್ಬರಿಗೆ ವಾಟ್ಸ್‌ಆ್ಯ‍ಪ್‌ ಸಂದೇಶಗಳ ಮೂಲಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ನರೇಗಲ್‌ ಪೊಲೀಸ್‌ ಠಾಣೆಯ ಕಾನ್‌ಸ್ಟೆಬಲ್‌ ಶಂಕರ್‌ ನಾಲ್ಕರ್‌ ಅವರನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್‌. ನೇಮಗೌಡ ಭಾನುವಾರ ಅಮಾನತುಗೊಳಿಸಿದ್ದಾರೆ.

ವಿದ್ಯಾರ್ಥಿನಿ ಕಾಲೇಜಿಗೆ ತೆರಳುವ ಮಾರ್ಗದಲ್ಲಿ ಆರೋಪಿಯು ಪ್ರತಿದಿನ ಕಿರುಕುಳ ನೀಡುತ್ತಿದ್ದ. ಅಲ್ಲದೇ, ಅವರ ಮೊಬೈಲ್‌ಗೆ ನಿರಂತರ ವಾಟ್ಸ್‌ಆ್ಯಪ್‌ ಸಂದೇಶ ಕಳುಹಿಸುತ್ತಿದ್ದರು ಎನ್ನಲಾಗಿದೆ. ಇದರಿಂದ ರೋಸಿಹೋದ ವಿದ್ಯಾರ್ಥಿನಿಯು ಕೆಲ ಸುದ್ದಿ ವಾಹಿನಿಗಳೆದುರು ಅಳಲು ತೋಡಿಕೊಂಡಿದ್ದರು. ವರದಿ ಪ್ರಸಾರವಾಗುತ್ತಿದ್ದಂತೆ ಎಸ್‌ಪಿ ಕಚೇರಿಯಿಂದ ವಿದ್ಯಾರ್ಥಿನಿಯನ್ನು ಸಂಪರ್ಕಿಸಿ ಮಾಹಿತಿ ಪಡೆದು ಇಲಾಖೆ ತನಿಖೆ ನಡೆಸಲು ಕ್ರಮ ಜರುಗಿಸಲಾಗಿದೆ.

‘ಆರೋಪಿಯನ್ನು ಅಮಾನತುಗೊಳಿಸಲಾಗಿದೆ. ಪ್ರಕರಣ ಕುರಿತು ತನಿಖೆ ನಡೆಸುವಂತೆ ಡಿವೈಎಸ್‌ಪಿ ಮತ್ತು ಸಿಪಿಐ ಅವರಿಗೆ ಸೂಚಿಸಲಾಗಿದೆ. ಈ ಬಗ್ಗೆ ಪೂರ್ಣ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT